NEWSನಮ್ಮಜಿಲ್ಲೆಸಂಸ್ಕೃತಿ

ದೇವರು- ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿ: ಕೋಡಿಮಠದ ಶ್ರೀ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್‌.ಪೇಟೆ: ಇಂದಿನ ಒತ್ತಡದ ಬದುಕಿನಲ್ಲಿ ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಪಡೆಯುವ ಜೊತೆಗೆ ಕೈ ಹಿಡಿಯುವ ಕಾರ್ಯದಲ್ಲಿ ಯಶಸ್ಸನ್ನು ಕೂಡಾ ಹೊಂದಬಹುದಾಗಿದೆ ಎಂದು ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಪೀಠಾಧಿಪತಿ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಹೇಳಿದರು.

ಇಂದು ಪಟ್ಟಣದ ಹೊರವಲಯದ ಕಿಕ್ಕೇರಿ ರಸ್ತೆಯಲ್ಲಿ ಕೆ.ಆರ್.ಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ರಾಜೇಶ್ ಹಾಗೂ ಶಿಕ್ಷಕಿ ಅಖಿಲರಾಜೇಶ್ ದಂಪತಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಮುಚ್ಛಯದ
ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಭಗವಂತನ ಸಾಕ್ಷಾತ್ಕಾರಕ್ಕೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ, ನಿಷ್ಕಲ್ಮಷವಾದ ಮನಸ್ಸಿನಿಂದ ಭಗವಂತನನ್ನು ಪ್ರಾರ್ಥಿಸಿ ಪೂಜಿಸಿ ಆರಾಧಿಸಿದರೆ ಸಾಕು ಭಗವಂತನ ಒಲುಮೆಗೆ ಪಾತ್ರರಾಗಬಹುದಾಗಿದೆ. ನಮ್ಮ ಮನಸ್ಸಿನ ಒತ್ತಡಗಳು ಹಾಗೂ ದ್ವೇಷ ಅಸೂಯೆ ಬಿಟ್ಟು ಮಾನಸಿಕವಾಗಿ ನೆಮ್ಮದಿಯನ್ನು ಪಡೆಯಲು ಶರಣ ಶ್ರದ್ಧಾಕೇಂದ್ರವಾಗಿರುವ ದೇವಾಲಯಗಳಿಗೆ ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಹೋಗಿ ಪ್ರಾರ್ಥನೆ ಸಲ್ಲಿಸಿದರೆ ಸಾಕು ಎಂದರು.

ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ದ್ವೇಷಾಸೂಯೆಗಳು ಮೇಳೈಸುತ್ತಿವೆ. ಮಕ್ಕಳು ಮೊಬೈಲ್ ಫೋನಿನ ದಾಸರಾಗಿ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಮರೆತು ದಿಕ್ಕುತಪ್ಪಿ ಸಮಾಜ ಕಂಟಕರಾಗುತ್ತಿದ್ದಾರೆ. ಗುರು-ಹಿರಿಯರು ಹಾಗೂ ತಂದೆ-ತಾಯಿಗಳನ್ನು ಗೌರವಿಸುವ ಬದಲಿಗೆ ಅವರನ್ನೇ ಅವಮಾನಿಸುವ ಕೆಟ್ಟ ದೃಷ್ಟಿಯಿಂದ ನೋಡುವ, ಹಣ ಆಸ್ತಿಯ ದುರಾಸೆಯಿಂದ ಯಾವುದೇ ಕೆಟ್ಟ ಕೆಲಸ ಮಾಡುವ ಮಟ್ಟಕ್ಕೆ ಇಂದಿನ ಯುವಜನರು ಇಳಿದಿದ್ದಾರೆಂದರೆ ನಮ್ಮ ಸಮಾಜ ಎತ್ತ ಸಾಗುತ್ತಿದೆ ಎನ್ನುವುದನ್ನು ನಾವು ಕಾಣಬಹುದಾಗಿದೆ ಎಂದರು.

ಇನ್ನು ತಂದೆ-ತಾಯಿಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ವಿದ್ಯಾವಂತರನ್ನಾಗಿ ಮಾಡಿಸಿ ಶಿಕ್ಷಣದ ಜ್ಞಾನದ ಬೆಳಕಿನ ಸಂಸ್ಕಾರವನ್ನು ಕೊಡಿಸಿ ಸನ್ಮಾರ್ಗದಲ್ಲಿ ಸಾಗಿ ಜೀವನದಲ್ಲಿ ಗುರಿಮುಟ್ಟುವಂತೆ ಪ್ರೇರೇಪಿಸಬೇಕು. ನಮ್ಮ ಸಂಸ್ಕೃತಿ ಪರಂಪರೆ ಹಾಗೂ ಗುರುಹಿರಿಯರನ್ನು ಗೌರವಿಸುವ ವಿಶಾಲವಾದ ಮನೋಭಾವನೆಯನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯುವಂತೆ ಮಾರ್ಗದರ್ಶನ ಮಾಡಬೇಕು ಎಂದು ಕೋಡಿಶ್ರೀಗಳು ಕಿವಿಮಾತು ಹೇಳಿದರು.

ಈ ವೇಳೇ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್, ಮಾಜಿಶಾಸಕ ಬಿ.ಪ್ರಕಾಶ್, ವಕೀಲರಾದ ಗಂಜಿಗೆರೆ ಲೋಕೇಶ್, ಬಂಡಿಹೊಳೆ ಗಣೇಶ್, ಮುಖಂಡರಾದ ಚಂದ್ರಶೇಖರ್, ಶ್ರೀಧರ ಸಿರಿವಂತ್, ಮನು-ಶರತ್, ಬಳ್ಳೇಕೆರೆ ವರದರಾಜೇಗೌಡ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?