LatestNEWSನಮ್ಮಜಿಲ್ಲೆ

ಕೆಣಕಿದರೆ ಸುಮ್ಮನಿರೋಲ್ಲ: ಪಾಕಿಸ್ತಾನಕ್ಕೆ ಎಚ್ಚರಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ
  • 1 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ

ಬೆಂಗಳೂರು: ದೇವನಹಳ್ಳಿ ಶಾಂತಿ ಬೋಧಿಸಿದ ಬುದ್ದ, ಬಸವರ ನಾಡು ನಮ್ಮದು. ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ದೇವನಹಳ್ಳಿ ತಾಲೂಕು ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಯಿತಿ ವತಿಯಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದರು.

ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದರು.

ಇನ್ನು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ. ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ನಮ್ಮ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದರು.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಜಿಲ್ಲಾ ಅಭಿವೃದ್ಧಿಗೆ ಶ್ರಮಿಸುತ್ತಿರುವುದನ್ನು, ಅವರು ಕಾರ್ಯಕ್ಕೆ ಹಾಗೂ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಿದ್ದಕ್ಕೆ ಸಿ.ಎಂ, ಡಿ.ಸಿ.ಎಂ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನಿಸಿದರು.

Deva
the authorDeva

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?