CrimeNEWSನಮ್ಮರಾಜ್ಯ

ಅಕ್ರಮ ಮದ್ಯ ಸಾಗಣೆ ಆರೋಪ ಪ್ರಕರಣ: ಪಂಚನಾಮೆ ಆಧಾರದಲ್ಲಿ FIR ದಾಖಲು ಕಾನೂನು ಬಾಹಿರ – ಹೈ ಕೋರ್ಟ್‌ ಮಹತ್ವದ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರಿಂದ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು ಪಂಚನಾಮೆ ನಡೆಸಿದ್ದ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇಬ್ಬರು ಆರೋಪಿಗಳಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.

ಕಾನೂನು ಬಾಹಿರವಾಗಿ ಮದ್ಯಸಾಗಾಟ ಆರೋಪದಲ್ಲಿ ಶಿಕ್ಷೆಗೆ ಒಳಗಾಗೊದ್ದ ದಯಾನಂದ ಮತ್ತು ರವಿ ಎಂಬುವರು ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.

ಯಾವುದೇ ಆರೋಪ ಎದುರಾದಲ್ಲಿ ಮಾಹಿತಿದಾರರು ಸಹಿ ಹಾಕಿ ನೀಡಿದ ದೂರಿನಿಂದ ಎಫ್‌ಐಆರ್ ದಾಖಲಿಸಬಹುದಾಗಿದೆ. ಇಲ್ಲವೇ, ನಿಖರ ಮಾಹಿತಿಯ ಆಧಾರದಲ್ಲಿ ಪೊಲೀಸ್ ಅಧಿಕಾರಿ ದೂರು ದಾಖಲಿಸಿಕೊಂಡು ಎಫ್‌ಐಆರ್‌ ದಾಖಲಿಸುತ್ತಾರೆ. ಈ ಎರಡರಲ್ಲಿಯೂ ಮಾಹಿತಿಯನ್ನು ಮೊದಲು ಲಿಖಿತವಾಗಿ ದಾಖಲಿಸಿಕೊಂಡು ನಂತರ ತನಿಖೆ ನಡೆಸುತ್ತಾರೆ.

ಆದರೆ, ಪ್ರಸ್ತುತ ಪ್ರಕರಣದಲ್ಲಿ ಈ ಪ್ರಕ್ರಿಯೆ ನಡೆದಿಲ್ಲ. ಬದಲಿಗೆ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದವರಿಂದ ಮದ್ಯ ವಶಪಡಿಸಿಕೊಂಡು ಪಂಚನಾಮೆ ನಡೆಸಿದ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನುಬಾಹಿರ ಕ್ರಮ. ಈ ಅಂಶ ಪರಿಗಣಿಸದೆ ಶಿಕ್ಷೆ ವಿಧಿಸಿರುವುದು ದೋಷದಿಂದ ಕೂಡಿದೆ ಎಂದು ನ್ಯಾಯಪೀಠ ಹೇಳಿದೆ.

ನಡೆದಿದ್ದು ಏನು? ಹುಣಸೂರಿನ ಅಬಕಾರಿ ವಿಭಾಗದ ಸಬ್ ಇನ್‌ಸ್ಪೆಕ್ಟರ್‌ 2008 ನವೆಂಬರ್ 24ರಂದು ಬೆಳಗ್ಗೆ 10.15ರ ಸಮಯದಲ್ಲಿ ಚಲ್ಲಹಳ್ಳಿ ಗ್ರಾಮದ ಬಳಿ ಸಿಬ್ಬಂದಿಯೊಂದಿಗೆ ಗಸ್ತು ತಿರುಗುವ ವೇಳೆ ಮೂಲಗಳಿಂದ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬರು ಮದ್ಯ ಸಾಗಾಟ ಮಾಡುತ್ತಿರುವ ವಿಚಾರ ಗೊತ್ತಾಗಿತ್ತು.

ಈ ಸಂಬಂಧ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಆರೋಪಿಯ ವಾಹನದಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಪಡೆದುಕೊಂಡಿದ್ದ ದಾಖಲೆ ಪರಿಶೀಲಿಸಿದರು. ಈ ಕುರಿತು ಸೂಕ್ತ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ವಾಹನ ಜಪ್ತಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದರು.

180 ಎಂಎಲ್‌ನ 48 ಒರಿಜಿನಲ್ ಚಾಯ್ಸ್‌ನ ವಿಸ್ಕಿ ಬಾಟಲ್ ವಶಪಡಿಸಿಕೊಂಡಿದ್ದರು. ಇದಾದ ಬಳಿಕ ವಶಕ್ಕೆ ಪಡೆದಿದ್ದ ಮದ್ಯವನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬಳಿಕ ಆರೋಪಿಗಳ ವಿರುದ್ದ ತನಿಖೆ ನಡೆಸಿ ಹುಣಸೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ್ದ ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಗಳಿಗೆ 5 ವರ್ಷ ಶಿಕ್ಷೆ ಮತ್ತು ಒಂದು ಲಕ್ಷ ದಂಡ ವಿಧಿಸಿತ್ತು. ಈ ಆದೇಶವನ್ನು ಮೈಸೂರಿನ ಸತ್ರ ನ್ಯಾಯಾಲಯ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ದಾಖಲಿಸಿದ್ದರು.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ