CrimeNEWSನಮ್ಮಜಿಲ್ಲೆ

ಆಣೆಹೊಲ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಆರೋಪಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ಹನೂರು‌: ಮಹದೇಶ್ವರ ಬೆಟ್ಟದ ಸಮೀಪ ಆಣೆಹೊಲ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಆಣೆಹೊಲ ಗ್ರಾಮದ ಚಂದ್ರ‌‌ ಎಂಬಾತನೆ‌ ಬಂಧಿತ ಆರೋಪಿ. ಚಾಮರಾಜನಗರ ಜಿಲ್ಲೆ ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ವಲಯದ ಅಬಕಾರಿ ನಿರೀಕ್ಷಕ ಸುನಿಲ್.ಡಿ ಅವರ ನೇತೃತ್ವದಲ್ಲಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಮನೆಯಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಆಣೆಹೊಲ ಗ್ರಾಮದ ಚಂದ್ರ ಬಿನ್ ಲೇಟ್‌ ಬಿಳಿಗಿರಿರಂಗ ಅವರ ಮನೆಯ ಮೇಲೆ ದಾಳಿ ನಡೆಸಿದ್ದು ಆ ವೇಳೆ ಮದ್ಯವನ್ನು ಸಂಗ್ರಹಣೆ ಮಾಡಿರುವುದು ಕಂಡುಬಂದಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

ಈ ಕಾರ್ಯಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಸಿದ್ದಯ್ಯ, ಶ್ರೀಧರ್ ಡಿ. ಅಬಕಾರಿ ಪೇದೆಗಳಾದ ಪ್ರದೀಪ್‌ ಕುಮಾರ್‌ ಕೆ. ಮತ್ತು ಸಿದ್ದರಾಜು ಬಿ. ಭಾಗವಹಿಸಿದ್ದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು