NEWSಕೃಷಿನಮ್ಮರಾಜ್ಯರಾಜಕೀಯ

ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿಯ ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಅಲ್ಲದೆ ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಈ ಕುರಿತು ಎಎಪಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ ಇಲಾಖೆಯ ಅಧಿಕಾರಿಗಳಿಂದ ತಿಂಗಳಿಗೆ ತಲಾ ₹6-8 ಲಕ್ಷ ಕೇಳುತ್ತಿದ್ದಾರೆ ಎಂದರೆ ಅದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಲೆಷ್ಟು ಎಂದು ಜನರು ಕೇಳುವ ಮೊದಲು ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಸಚಿವರ ವಿರುದ್ಧ ರಾಜ್ಯಪಾಲರಿಗೆ ಧೈರ್ಯವಾಗಿ ದೂರು ಸಲ್ಲಿಸಿರುವ ಅಧಿಕಾರಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು. ಸಿಎಂ ಮತ್ತು ಡಿಸಿಎಂ ಖುದ್ದಾಗಿ ಪ್ರಕರಣವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎಎಪಿ ದೊಡ್ಡ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್, ಪೇಸಿಎಂ ವಿರುದ್ಧ ಸಿದ್ದರಾಮಯ್ಯ ಅವರು ರಾಜ್ಯದ್ಯಂತ ಹೋರಾಟ ನಡೆಸಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಬಂದಿದೆ. ಭ್ರಷ್ಟಾಚಾರ, ಕಮಿಷನ್ ದಂಧೆಯ ಅಸ್ತಿತ್ವ ಹಿಂದಿನಂತೆಯೇ ಇದೆ. ಯಾವುದೇ ಬದಲಾವಣೆಯಾಗಿಲ್ಲ. ರೈತರ ಸಂಕಷ್ಟವೇನು ಎಂಬುದು ಗೊತ್ತಿದ್ದು ಕೃಷಿ ಕ್ಷೇತ್ರದಲ್ಲಿ ಮಂತ್ರಿಗಳು ಭ್ರಷ್ಟಾಚಾರಕ್ಕೆ ಇಳಿದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ವಿರುದ್ಧದ ನಿಲುವನ್ನು ಕಾಪಿ ಮಾಡಿ: ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಸರ್ಕಾರಿ ಆಸ್ಪತ್ರೆ, ಶಾಲೆ, ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡು ರಾಜ್ಯದಲ್ಲಿ ಅಳವಡಿಸಿಕೊಂಡಿರುವಂತೆ ಅಲ್ಲಿನ ಭ್ರಷ್ಟಾಚಾರ ವಿರುದ್ಧದ ನಿಲುವನ್ನು ಕಾಪಿ ಮಾಡಿ ಅಳವಡಿಸಿಕೊಳ್ಳಬೇಕು ಎಂದು ಮೋಹನ್ ದಾಸರಿ ಸಲಹೆ ನೀಡಿದರು.

ಈ ವೇಳೆ ಪಕ್ಷದ ಮುಖಂಡರಾದ ಜಗದೀಶ್ ಚಂದ್ರ ಹಾಗೂ ಸಮಾಜಿಕ ಜಾಲತಾಣಗಳ ಮುಖ್ಯಸ್ಥರಾದ ದರ್ಶನ್ ಜೈನ್ ಇದ್ದರು.

ಪ್ರಕರಣ ವೇನು?: ಮಂಡ್ಯ ಜಿಲ್ಲೆಯ 7 ಜನ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಲಾ 6-8 ಲಕ್ಷ ನೀಡುವಂತೆ ಕೃಷಿ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಗಳು ಉಲ್ಲೇಖಿತ ದೂರು ಅರ್ಜಿ ಸಲ್ಲಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು