NEWSಸಂಸ್ಕೃತಿ

ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಿ: ಡಿಸಿ ಡಾ. ಅನುರಾಧ ಕರೆ

ಯೋಗಾಭ್ಯಾಸ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಳ್ಳಬೇಕು. ನಮ್ಮ ಇಂದಿನ ಆರೋಗ್ಯವೇ ವೃದಾಪ್ಯ ಜೀವನದವರೆಗೂ ಉತ್ತಮವಾಗಿ ಇರಿಸಿಕೊಳ್ಳಲು ಪ್ರತಿನಿತ್ಯ ಬೆಳಿಗ್ಗೆ ಒಂದು ಗಂಟೆ ಯೋಗಾಭ್ಯಾಸಕ್ಕಾಗಿ ಸಮಯ ಮೀಸಲಿಡಬೇಕು. ಇದರೊಂದಿಗೆ ನಮ್ಮ ಮುಂದಿನ ಪೀಳಿಗೆಗೂ ಯೋಗಾಭ್ಯಾಸ ಹೇಳಿಕೊಟ್ಟು ಒಳ್ಳೆಯ ಆರೋಗ್ಯ ಕಾಪಾಡಿಕೊಳ್ಳಲು ಅರಿವು ಮೂಡಿಸಬೇಕು-ಡಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಯೋಗಾಭ್ಯಾಸ ಒಂದು ದಿನಕ್ಕೆ ಸೀಮಿತ ಬೇಡ, ನಮ್ಮ ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಬೇಕು. ಇದರಿಂದ ದೈಹಿಕ ಸದೃಢ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸಿಕೊಳ್ಳಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ವತಿಯಿಂದ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆದಲ್ಲಿ ವಿವಿಧ ಯೋಗಾಸನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಯೋಗಾಭ್ಯಾಸ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಳ್ಳಬೇಕು. ನಮ್ಮ ಇಂದಿನ ಆರೋಗ್ಯವೇ ವೃದಾಪ್ಯ ಜೀವನದವರೆಗೂ ಉತ್ತಮವಾಗಿ ಇರಿಸಿಕೊಳ್ಳಲು ಪ್ರತಿನಿತ್ಯ ಬೆಳಿಗ್ಗೆ ಒಂದು ಗಂಟೆ ಯೋಗಾಭ್ಯಾಸಕ್ಕಾಗಿ ಸಮಯ ಮೀಸಲಿಡಬೇಕು. ಇದರೊಂದಿಗೆ ನಮ್ಮ ಮುಂದಿನ ಪೀಳಿಗೆಗೂ ಯೋಗಾಭ್ಯಾಸ ಹೇಳಿಕೊಟ್ಟು ಒಳ್ಳೆಯ ಆರೋಗ್ಯ ಕಾಪಾಡಿಕೊಳ್ಳಲು ಅರಿವು ಮೂಡಿಸಬೇಕು ಎಂದರು.

ನಮ್ಮ ದಿನದ 24 ಗಂಟೆಯೂ ಸ್ಥಿರ ಮನಸ್ಸು, ಕೆಲಸ ಕಾರ್ಯಗಳಲ್ಲಿ ಉಲ್ಲಾಸ ತುಂಬುವ ಬಲವಾಗಿ ಶಕ್ತಿ ಯೋಗಕ್ಕಿದೆ. ಮಕ್ಕಳು ಚಿಕ್ಕ ವಯಸ್ಸಿನಲ್ಲೇ ಯೋಗಾಭ್ಯಾಸದ ವಿವಿಧ ಆಸನಗಳನ್ನು ಕರಗತ ಮಾಡಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದ ವರೆಗೆ ಯೋಗಾಭ್ಯಾಸದ ಸಾಧನೆ ಮಾಡಲು ಅದ್ಭುತ ಅವಕಾಶಗಳಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಕೆ.ಟಿ ಅಶ್ವಿನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯಾಧಿಕಾರಿ ಲಕ್ಕ ಕೃಷ್ಣ ರೆಡ್ಡಿ, ಜಿಲ್ಲಾ ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಆಯುಷ್ ವೈದ್ಯಾಧಿಕಾರಿಗಳಾದ ಡಾ. ಖುದ್ಸಿಯಾ ತಸ್ಮೀನ್, ಡಾ. ವಿಜಯಲಕ್ಷ್ಮಿ, ಡಾ. ಲಲಿತಾ, ಡಾ. ಸೈಯದ್ ಮುಷ್ತಾಕ್, ಡಾ. ಲಕ್ಷ್ಮೀ ಚರಿತ, ಡಾ. ಸೋಮಶೇಖರ್, ಡಾ. ಹನುಮಂತರೆಡ್ಡಿ, ಡಾ. ಅಂಬಿಕಾ, ಡಾ. ಶೈಲಜ, ಅಧೀಕ್ಷಕರಾದ ರಾಘವೇಂದ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಯೋಗ ತರಬೇತಿದಾರರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.

Deva
the authorDeva

Leave a Reply

error: Content is protected !!
Latest news
ಜೀವನದಲ್ಲಿ ದಿನಂಪ್ರತಿ ಯೋಗಾಭ್ಯಾಸ ಅಳವಡಿಸಿಕೊಳ್ಳಿ: ಡಿಸಿ ಡಾ. ಅನುರಾಧ ಕರೆ ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದ ಆರೋಪ: ಡಾಕ್ಟರ್ ವಿರುದ್ಧ ಎಫ್‌ಐಆರ್ ದಾಖಲು ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್‌ ಬೃಹತ್‌ ಪಾದಯಾತ್ರೆ- ಇದು ಕೇವಲ ಭಾಷಣಕ್ಕಷ್ಟೇ ಅಲ್ಲ: ನಿಖಿಲ್ ಕುಮಾರಸ್ವಾಮಿ ಎಚ್... ನಿಂತಿರುವ ಕಾಲೇಜು ವಿದ್ಯಾರ್ಥಿ ಚುನಾವಣೆ ಇದೇ ವರ್ಷದಿಂದ ಮತ್ತೆ ಆರಂಭ: ಸಿಎಂ ಡಿಕೆಶಿ ಅಪ್ಪ ಅಂದ್ರೆ ಭಯ- ಧೈರ್ಯ ಅಪ್ಪ ಅಂದ್ರೆ ಭವಿಷ್ಯದ ಗುರು ಅಪ್ಪ ಅಂದ್ರೆ ಆಲದ ಮರ ಇದಾವುದು ಅಲ್ಲ ಪದಗಳಿಗೆ ನಿಲುಕದ ದೈವ ಗ್ರಾಚ್ಯುಟಿ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸಲ್ಲ KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ