NEWSನಮ್ಮರಾಜ್ಯಶಿಕ್ಷಣ

2025-26ನೇ ಸಾಲಿನಿಂದಲೇ ಜಾರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.33 ಅಂಕ ಪಡೆದರೆ ಪಾಸ್- ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇನ್ಮುಂದೆ ಎಸ್ಸೆಸ್ಸಲ್ಸಿ (SSLC) ಪರೀಕ್ಷೆಯಲ್ಲಿ ಶೇ.33ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ ಒಂದು ವಿಷಯದಲ್ಲಿ 100ಕ್ಕೆ ಶೇ.33ರಷ್ಟು ಅಂಕ ಪಡೆದರೆ ಎಸ್ಸೆಸ್ಸಲ್ಸಿ ಪಾಸ್‌ ಎಂದು ಘೋಷಿಸಲಾಗುವುದು.

ಅಂದರೆ 6 ವಿಷಯಗಳ ಒಟ್ಟು ಗರಿಷ್ಠ ಅಂಕ 625ಕ್ಕೆ ಕನಿಷ್ಠ 206 ಅಂಕ ಪಡೆದರೆ ಅಂತ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ.33ರಷ್ಟು ಅಂಕ ಪಡೆಯಬೇಕಾಗುತ್ತದೆ ಎಂದು ಸಚಿವರು ವಿವರಿಸಿದರು.

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನು ತಯಾರು ಮಾಡಿದರು ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದರು.

ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇ.33 ಪಾಸಿಂಗ್‌ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ.33 ಅಂಕ ಪಡೆದ ವಿದ್ಯಾರ್ಥಿಗಳನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿವರವಾಗಿ ತಿಳಿಸಿದರು.

ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ  ಸಂಪೂರ್ಣ ಮಾಹಿತಿ: https://ksrtcarogya.in/

Megha
the authorMegha

Leave a Reply

error: Content is protected !!
Latest news
ನಾಳೆ ಮಧ್ಯಾಹ್ನದ ಬಳಿಕ ವಿಧಾನ ಸೌಧ, ವಿಕಾಸ ಸೌಧ, ಬಹುಮಹಡಿಗಳ ಕಟ್ಟಡದ ನೌಕರರಿಗೆ ರಜೆ ಘೋಷಿಸಿ ಸರ್ಕಾರದ ಆದೇಶ ಮುಂದಿನ 5 ವರ್ಷದಲ್ಲಿ ಉದ್ಯೋಗವಿಲ್ಲದ ಪದವೀಧರರ ಸಂಖ್ಯೆ ಹೆಚ್ಚಾಗಲಿದೆ, ಇತ್ತ ಪ್ಲಂಬರ್, ಎಲೆಕ್ಟ್ರಿಷಿಯನ್ಸ್‌ ಸಿಗಲ್ಲ–... ಬನ್ನೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾರ ಅಣ್ಣ ವಾಸುದೇವನ್ ನಿಧನ ಅದೃಷ್ಟ ಅಂದರೆ ಇದೇ ಅಲ್ವಾ- ನಾಲ್ಕಾರು ಮನೆಗೆಲಸ ಮಾಡಿ ಜೀವನ ಸಾಗಿಸುತ್ತಿದ್ದಾಕಿ ಈಗ ಪಶ್ಚಿಮ ಬಂಗಾಳದ ಮಂತ್ರಿ ! NWKRTC: ನೌಕರರ 11 ತಿಂಗಳ ಹಿಂಬಾಕಿ ಕುರಿತು ವಿವರಣೆ ಸ್ಲಿಪ್‌ ನೀಡಲು ಆದೇಶ ಮಾಡುತ್ತೇನೆ- ನೌಕರರಿಗೆ ಎಂಡಿ ಭರವಸೆ ಸರ್ಕಾರಿ ನೌಕರ ಪರೋಕ್ಷವಾಗಿ ಬೇರೊಬ್ಬರ ಮೂಲಕ ಲಂಚ ಪಡೆದರೂ ಆತ ತಪ್ಪಿತಸ್ಥನೆ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಇಂದಿನಿಂದ ಜಾರಿ: ಕರೆಂಟ್‌ ಬಿಲ್‌ಕೊಟ್ಟ ದಿನದಿಂದ ರಜೆ ಹೊರತುಪಡಿಸಿ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಸರ್ಕಾರಿ ಸಾರಿಗೆ ಚಾಲನಾ, ತಾಂತ್ರಿಕಾ ಸಿಬ್ಬಂದಿ ಕಾರ್ಮಿಕರಲ್ಲ: “ಸಂಸ್ಥೆ ನಿಯಮಗಳ ಮೂಲಕ ಯಾರು ನೇಮಕವಾಗಿದ್ದಾರೋ ಅವರೇ ಅ... ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ