NEWSಕೃಷಿನಮ್ಮಜಿಲ್ಲೆ

ಎಲ್ಲಿಯಾದರು ಆಸ್ತಿ ನೋಂದಣಿ ಮಾಡಿಸುವ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ತಿಳಿಸಿದ್ದಾರೆ.

2011ರಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು 2024 ರಲ್ಲಿ ಮಾರ್ಚ್‌ನಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದು ಆ ಜಿಲ್ಲೆಯಲ್ಲಿ ಯಶಸ್ವಿಯಾಗುತ್ತಿರುವ ಕಾರಣ ರಾಜ್ಯಾದ್ಯಂತ ಇದನ್ನು ವಿಸ್ತರಿಸಲಾಗಿದೆ. ಅದರಂತೆ ಜಿಲ್ಲೆಯ ಉಪನೋಂದಣಿ ಕಚೇರಿಯಲ್ಲೂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಎಲ್ಲಿಯಾದರು (Any Where) ನೋಂದಣಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪನೋಂದಣಿ ಕಚೆರಿಗಳಿಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎಲ್ಲಿಯಾದರು ನೋಂದಣಿಯಲ್ಲಿ ದಸ್ತಾವೇಜಿನ ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರು ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಈ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.

ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಇದರಿಂದ ಉಪನೋಂದಣಿ ಕಚೇರಿಯಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದುದರಿಂದ ಸಾರ್ವಜನಿಕರು ಎಲ್ಲಿಯಾದರು (Any Where) ನೋಂದಣಿಯ ಸೌಲಭ್ಯದ ಸದುಪಯೋಗ ಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಪಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳ ಬಹುದಾಗಿದೆ. ಉದಾಹರಣೆಗೆ ನೆಲಮಂಗಲ ಉಪನೋಂದಣಿ ಕಚೇರಿ, ವ್ಯಾಪ್ತಿಗೆ ಬರುವ ಸ್ವತ್ತುಗಳನ್ನು ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಯಾವುದಾದರು ಒಂದು ಉಪನೋಂದಣಿ ಕಚೇರಿಯಲ್ಲಿ ಆಯ್ಕೆ ಮಾಡಿಕೊಂಡು ನೋಂದಣಿ ಪ್ರಕ್ರಿಯೆಯನ್ನು ಡಿಕೊಳ್ಳಬಹುದಾಗಿದೆ.

ಈ ಸೌಲಭ್ಯವು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಪಟ್ಟ ತಾಲೂಕುಗಳಾದ ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ, ಉಪನೋಂದಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಆಸ್ತಿಗಳನ್ನು ಜಿಲ್ಲೆಯ ಯಾವುದೇ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ