NEWSನಮ್ಮಜಿಲ್ಲೆನಮ್ಮರಾಜ್ಯ

ಹಳೇ ಪಿಂಚಣಿ ಯೋಜನೆ ಜಾರಿಗೆ ಪರಿಶೀಲನೆ: ಶೀಘ್ರದಲ್ಲೇ ಸರ್ಕಾರಿ ನೌಕರರಿಗೆ ಸಿಹಿಸುದ್ದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನೃತೃತ್ವದ ಸರ್ಕಾರದ ಅಧಿಕಾರಿದ ಚುಕ್ಕಾಣಿ ಹಿಡಿದ್ದು, ಸದ್ಯ ಸರ್ಕಾರಿ ನೌಕರರ ಬೇಡಿಕೆಯಾದ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರಬೇಕು ಎಂಬ ಬೇಡಿಕೆ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ.

ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ರಾಜ್ಯಾಧ್ಯಕ್ಷ ಸಿ .ಎಸ್. ಷಡಾಕ್ಷರಿ ನೇತೃತ್ವದಲ್ಲಿ ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌ ಅವರನ್ನು ಭೇಟಿ ಮಾಡಿದರು. ಸರ್ಕಾರದ ಮುಂದೆ ಹೊಸ ಬೇಡಿಕೆಯನ್ನು ಇಟ್ಟ ಅವರು, 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗೆ ಒಳಪಟ್ಟ ಸರ್ಕಾರಿ ನೌಕರರನ್ನು ಹಳೆಯ ಪಿಂಚಣಿ ಯೋಜನೆ ವ್ಯಾಪ್ತಿಗೆ ಪರಿಗಣಿಸಬೇಕು ಎಂದು ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ಮಾದರಿಯಲ್ಲಿ 1/4/2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರಿಗೆ ಹಳೇ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಸರ್ಕಾರದ ಅಧಿಸೂಚನೆಯನ್ವಯ 22/12/2003ಕ್ಕಿಂತ ಪೂರ್ವದಲ್ಲಿ ಹೊರಡಿಸಲಾದ ಅಧಿಸೂಚನೆಗಳನ್ವಯ ಕೇಂದ್ರ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿದೆ. ಕೇಂದ್ರ ಸರ್ಕಾರದ ಅಧಿಸೂಚನೆಯನ್ವಯ ಕಲ್ಪಿಸಿರುವ ಅವಕಾಶದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸಹ 1/4/2006ರ ಪೂರ್ವದಲ್ಲಿ ಹೊರಡಿಸಿದ ನೇಮಕಾತಿ ಅಧಿಸೂಚನೆಯನ್ವಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಪಾಲ್ಗೊಂಡು ತಡವಾಗಿ, ಅಂದರೆ 1/4/2006ರ ನಂತರ ನೇಮಕಾತಿ ಆದೇಶ ಪಡೆದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ನೌಕರರನ್ನು ಹಳೇ ಪಿಂಚಣಿ ಯೋಜನೆ ವ್ಯಾಪ್ತಿಯಲ್ಲಿ ಪರಿಗಣಿಸಿ ಪಿಂಚಣಿ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಲಾಗಿದೆ.

ಕಳೆದ ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ತರೀಕೆರೆಯ ಶಾಸಕ ಶ್ರೀನಿವಾಸ ಜಿ. ಎಚ್. ಹೊಸ ಪಿಂಚಣಿ ಯೋಜನೆ ಮತ್ತು ಹಳೆ ಪಿಂಚಣಿ ಯೋಜನೆಯ ಕುರಿತು ಪ್ರಶ್ನಿಸಿದ್ದರು. ಇದಕ್ಕೆ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದರು.

1/4/2006 ರಿಂದ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಹಾಗೂ ಅನುದಾನಿತ ಮತ್ತು ನಿಗಮ ಮಂಡಳಿಗಳಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಕೈಗೊಂಡಿರುವ ಕ್ರಮವೇನು? ಎಂದು ಪ್ರಶ್ನಿಸಲಾಗಿತ್ತು. ಮುಖ್ಯಮಂತ್ರಿಗಳು ಉತ್ತರದಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಯನ್ನು ದಿನಾಂಕ 01/01/2004ರಿಂದ ಜಾರಿಗೊಳಿಸಿರುತ್ತದೆ. ಅದರಂತೆಯೇ ಇತರ ರಾಜ್ಯಗಳು ಈ ಯೋಜನೆಯನ್ನು ಅಳವಡಿಸಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಕೂಡಾ ಸರ್ಕಾರದ ಆದೇಶ 31/03/2006 ರನ್ವಯ ದಿನಾಂಕ 01/04/2006ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿರುತ್ತದೆ ಎಂದು ಸಿದ್ದರಾಮಯ್ಯ ಉತ್ತರಿಸಿದ್ದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ