NEWSನಮ್ಮಜಿಲ್ಲೆಮೈಸೂರು

ಮೈಸೂರು ದಸರಾ: ಪ್ರವಾಸಿಗರ ಸುಗಮ ಸಂಚಾರಕ್ಕೆ ಪ್ರಾಮುಖ್ಯತೆ- ಶಾಸಕ ಶ್ರೀವತ್ಸ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೈಸೂರಿನ ಜನರ ಸುಗಮ ಸಂಚಾರಕ್ಕಾಗಿ ಶಾಸಕ ಟಿ.ಎಸ್.ಶ್ರೀವತ್ಸ ಆಯಕಟ್ಟಿನ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು.

ಸಂಚಾರ ವಿಭಾಗದ ಎಸಿಪಿ ಪರಶುರಾಮಪ್ಪ, ವೃತ್ತನಿರೀಕ್ಷಕ ಯೋಗೀಶ್ ಅವರೊಂದಿಗೆ ಹೆಚ್ಚು ಅಪಘಾತವಾಗುವ   ಸ್ಥಳಗಳನ್ನು ಪರಿಶೀಲಿಸಿದರು. ಈ ವೇಳೆ ಮಾತಾಡಿದ ಶಾಸಕ ಶ್ರೀವತ್ಸ, ಮೈಸೂರು ದಸರಾ ಸಂದರ್ಭದಲ್ಲಿ ಪ್ರವಾಸಿಗರಿಗೆ ಮತ್ತು ಮೈಸೂರಿನ ಜನರಿಗೆ ತೊಂದರೆ ಆಗದ ರೀತಿ ನೋಡಿಕೊಳ್ಳಬೇಕಿದೆ. ಇಂದು ಒಂದೆರಡು  ಅಪಘಾತ ಸ್ಥಳಗಳನ್ನು ಎಸಿಪಿ ಅವರಿಗೆ ತೋರಿಸಿದ್ದೇನೆ ಎಂದು ಹೇಳಿದರು.

ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ, ಎಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತವೆ, ಯಾವ ಕಡೆ ಹಂಪ್ಸ್‌ಗಳನ್ನು ಹಾಕಬೇಕು ಎಂಬ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ ಎಂದರು.

ಮಾನಂದವಾಡಿ ಜಂಕ್ಷನ್, ಸೆಂಚುರಿ ಪಾರ್ಕ್, ನಜರ್‌ಬಾದ್ ಠಾಣೆ ಬಳಿ, ಹಳೆ ರಿಜೆನ್ಸಿ ಥಿಯೇಟರ್ ಬಳಿ, ಜಿಂಜರ್ ಹೋಟೆಲ್ ತಿರುವಿನ ಜಾಗದಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಜನ ಇನ್ನು ಸಮಸ್ಯೆ ಹೇಳಿದ್ದಾರೆ. ಮೈಸೂರು ಸೌತ್ ಬಳಿ ಸಮಸ್ಯೆ ಇದೆ ಎಂದು ತಿಳಿಸಿದರು.

ಇನ್ನು ಜಾಕಿ ಫ್ಯಾಕ್ಟರಿ ನಾಡನಹಳ್ಳಿ ಪಾಳ್ಯ, ಎಚ್.ಡಿ.ಕೋಟೆ ಕಡೆ ಹೋಗುವ ರಸ್ತೆಗಳಲ್ಲೂ ಹಂಪ್ಸ್ ಹಾಕಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ಶ್ರೀವತ್ಸ ತಿಳಿಸಿದರು.

ಸಂಚಾರ ವಿಭಾಗದ ಎಸಿಪಿ ಪರಶುರಾಮಪ್ಪ, ವೃತ್ತನಿರೀಕ್ಷಕ ಯೋಗೀಶ್, ನಗರಪಾಲಿಕೆ ಸದಸ್ಯೆ ಛಾಯಾದೇವಿ, ಸಿಂಡಿಕೇಟ್ ಸದಸ್ಯ ಗೋಕುಲ್ ಗೋವರ್ಧನ್, ಬಿಜೆಪಿ ಮುಖಂಡರಾದ ಪ್ರದೀಪ್ ಕುಮಾರ್, ಜೈರಾಮ್, ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಜೋಗಿ ಮಂಜು, ಜಗದೀಶ್, ಕೆ.ಎಂ.ನಿಶಾಂತ್, ಮನೋಜ, ಪ್ರಸನ್ನ, ಕಿಶೋರ ಕಂಡೇಶ್, ಚೇತನ್ ಇದ್ದರು.

Leave a Reply

error: Content is protected !!
LATEST
KSRTCಯ 4ನಿಗಮಗಳ ಸಾರಿಗೆ ನೌಕರರಿಗೆ ಶೇ.45ರಷ್ಟು ವೇತನ ಹೆಚ್ಚಳಕ್ಕೆ ವೇದಿಕೆ ಆಗ್ರಹ NWKRTC: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲಕನ ಕಾಲು ಮುರಿತ ಸಾರಿಗೆ ನೌಕರರು ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೆ ಕೆಲಸದಿಂದ ವಜಾ: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ಜು.22ರಂದು ಬೆಂವಿವಿಯ ಸಂವಹನ ವಿಭಾಗದ ಸುವರ್ಣ ಮಹೋತ್ಸವ- ರಾಷ್ಟ್ರೀಯ ಸಮ್ಮೇಳನ ಕಿರಿಯ ವಕೀಲರಿಗೆ ಗೌರವಾನ್ವಿತ ಸಂಬಳ ಕೊಡಿ: ಹಿರಿಯ ವಕೀಲರಿಗೆ ಸುಪ್ರೀಂ ಕೋರ್ಟ್‌ ಸಿಜೆ ಚಂದ್ರಚೂಡ್ ಕಿವಿ ಮಾತು ಬದಲಿ ಜಾಗದಲ್ಲಿ ಮನೆ ಕಟ್ಟಿಕೊಡ್ತೇವೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ 24 ಗಂಟೆ ಉಚಿತ ವಿದ್ಯುತ್‌, ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ, ಗುಣಮಟ್ಟದ ಶಿಕ್ಷಣ, ಯುವಕರಿಗೆ ಉದ್ಯೋಗ ಮಹಿಳೆಯರಿಗೆ ತಿ... ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೆ.ವೆಂಕಟೇಶ್ ಭೇಟಿ: ಮೃತ ಕುಟುಂಬಕ್ಕೆ ಸಾಂತ್ವನ ಪರಿಹಾರ ಧನ ವಿತರಣೆ ಗೊರೂರು ಜಲಾಶಯದಿಂದ 25ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಇಂಜಿನಿಯರ್ ಆನಂದ್ ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಲಾಭ ಪಡೆಯಿರಿ: ತುಷಾರ್  ಗಿರಿನಾಥ್