NEWSನಮ್ಮಜಿಲ್ಲೆನಮ್ಮರಾಜ್ಯ

NWKRTC ಅಧಿಕಾರಿಗಳ, ನೌಕರರ ಕಲ್ಯಾಣಕ್ಕೆ ಮಹತ್ವದ ಯೋಜನೆ: ರಜತ ಮಹೋತ್ಸವದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಹಾಗೂ ಸಂಸ್ಥಾಪನಾ ದಿನದ ಕಾರ್ಯಕ್ರಮ ಭಾನುವಾರ ಶ್ರೀ ವೀರೇಂದ್ರ ಹೆಗ್ಗಡೆ ಸಭಾಭವನದಲ್ಲಿ ಅದ್ದೂರಿಯಾಗಿ ನಡೆಯಿತು. ಈ ವೇಳೆ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣಕ್ಕೆ, ಸಾರ್ವಜನಿಕರ ಸೇವೆಗೆ ನಿಗಮ ಮಹತ್ವದ ಕಾರ್ಯಕ್ರಮಗಳನ್ನು ಕೈಗೊಂಡಿರುವುದಾಗಿ ಸಮಾರಂಭಕ್ಕೆ ಚಾಲನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ದೇಶದ ಮುಂಚೂಣಿ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ ನಮಗಿದೆ. ಕೋವಿಡ್ ಸಂದರ್ಭದಲ್ಲಿ ಉಂಟಾದ ಆರ್ಥಿಕ ಸಂಕಷ್ಟದ ವೇಳೆ ನೂತನ ವಾಹನ ಖರೀದಿಸಲಾಗಿಲ್ಲ ಪ್ರಸ್ತುತ ಹೊಸ ಬಸ್‌ಗಳನ್ನು ಖರೀದಿಸುವ ಸಲುವಾಗಿ ಯೋಜನೆಯನ್ನು ನಮ್ಮ ಅಧಿಕಾರಿಗಳು ರೂಪಿಸಲಿದ್ದು ಅದಕ್ಕೆ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಇನ್ನು ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ನಿಗಮಗಳು ತನ್ನ ಎಲ್ಲ ಸಂಪ್ಮನೂಲಗಳನ್ನು ಕ್ರೂಢಿಕರಿಸಿಕೊಂಡು ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅಗತ್ಯ ಸೇವೆಗಳನ್ನು ಒದಗಿಸುತ್ತಿದೆ. ಅದರಲ್ಲಿ NWKRTC ನಿಗಮದ ಅಧಿಕಾರಿಗಳ ಈ ಕಾರ್ಯ ಪ್ರಶಂಸನೀಯ. ಇದರ ಜತೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿನ ಲಭ್ಯವಿರುವ ಅನುಕಂಪಕದ ಅವಲಂಬಿತ ಖಾಲಿ ಹುದ್ದೆಗಳನ್ನು ಯಾವುದೇ ವಿಳಂಬ ಮಾಡದೇ ಸೂಕ್ತ ರೀತಿಯಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

NWKRTC ನಿಗಮವು 25ನೇ ಸಂಸ್ಥಾಪನಾ ದಿನಾರಣೆಯ ಅಂಗವಾಗಿ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅವುಗಳು ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಕಲ್ಯಾಣ ಮತ್ತು ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿವೆ. ಅಲ್ಲದೇ ಸಾರ್ವಜನಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ವೇತನ: ನಿಗಮವು ನೌಕರರ ಮತ್ತು ಅಧಿಕಾರಿಗಳ ಮಕ್ಕಳಿಗೆ ಈ ಮೊದಲು ಕೈಗಾರಿಕಾ ತರಬೇತಿ, ಪದವಿ (ಬಿಇ, ಬಿಎಸ್ಸಿ) ಹಾಗೂ ಸ್ನಾತಕೋತ್ತರ ಪದವಿಗಳ ವ್ಯಾಸಂಗಕ್ಕಾಗಿ ಮಾತ್ರ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಈಗ ಯೋಜನೆ ಪರಿಷ್ಕರಿಸಿ ಹೆಚ್ಚಿನ ವಿದ್ಯಾಭ್ಯಾಸಗಳನ್ನು ಸ್ಕಾಲರ್‌ ಶಿಪ್‌ ವ್ಯಾಪ್ತಿಗೆ ಸೇರಿಸಿ ನೂತನ ಸಾರಿಗೆ ವಿದ್ಯಾ ಚೇತನ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಈ ಯೋಜನೆ ಅಡಿ ಹಿಂದಿನಗಿಂತಲೂ 3 ರಿಂದ 5½ ಪಟ್ಟು ಅಧಿಕ ಸ್ಕಾಲರ್‌ ಶಿಪ್‌ನ್ನು ನೀಡಲಾಗುತ್ತದೆ. ಈ ಯೋಜನೆಯಲ್ಲಿ ನೂತನವಾಗಿ ಪಿಯುಸಿ, ಪದವಿ ಬಿ.ಎ., ಬಿಕಾಂ, ಪಿಎಚ್‌ಡಿ ಹಾಗೂ ವಿದೇಶದಲ್ಲಿ ಮಾಡುತ್ತಿರುವ ಪದವಿ ವ್ಯಾಸಂಗವನ್ನು ಹೊಸದಾಗಿ ಸೇರ್ಪಡೆಗೊಳಿಸಿದೆ. ಈ ಯೋಜನೆಯನ್ನು ಪಾರದರ್ಶಕತೆಗೊಳಿಸಲು, ತ್ವರಿತತೆ ಹಾಗೂ ನಿಖರತೆಗಾಗಿ ಗಣಕೀಕರಣಗೊಳಿಸಲಾಗಿದೆ ಎಂದರು.

50 ಹೊಸ ಬಸ್ಸುಗಳಿಗೆ ಹಸಿರು ನಿಶಾನೆ: ಹೊಸೂರು ಕೇಂದ್ರೀಯ ಬಸ್ ನಿಲ್ದಾಣದಲ್ಲಿ 50 ಹೊಸ ಬಸ್ಸುಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸಮಾರಂಭದದಲ್ಲಿ ನಿಗಮವು 25 ವರ್ಷಗಳಿಂದ ನಡೆದು ಬಂದ ದಾರಿ ಕುರಿತು ಸಾಕ್ಷ್ಯಚಿತ್ರದ ಮೂಲಕ ತಿಳಿಸಲಾಯಿತು. ಕೈಪಿಡಿಯನ್ನು ಸಹ ಇದೇ ವೇಳೆ ಬಿಡುಗಡೆಗೊಳಿಸಲಾಯಿತು.

ಸುರಕ್ಷಿತ ಚಾಲನೆ ಮಾಡಿದ 240 ಚಾಲಕರಿಗೆ ಬೆಳ್ಳಿ ಹಾಗೂ ಬಂಗಾರದ ಪದಕಗಳನ್ನು ವಿತರಿಸಲಾಯಿತು. ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುವಾಗ ಮರಣ ಹೊಂದಿದ ನೌಕರರ ಕುಟುಂಬಗಳಿಗೆ ಪರಿಹಾರ ಧನವಾಗಿ 5 ಲಕ್ಷ ರೂ. ಚೆಕ್ ನೀಡಲಾಯಿತು. ಅಲ್ಲದೆ ಕ್ರೀಡೆಯಲ್ಲಿ ಗೆದ್ದ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಾದಂತಹ ಎಸ್‌.ಭರತ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಎಚ್. ಕೋನರೆಡ್ಡಿ, ಅರವಿಂದ್ ಬೆಲ್ಲದ್, ಪಿ.ಎಚ್. ನೀರಲಕೇರಿ, ಸದಾನಂದ ಡಂಗನವರ, ವಿ.ಎಸ್.ಪಾಟೀಲ್, ಹಾಲಿ ಹಾಗೂ ಮಾಜಿ ಸಂಸ್ಥೆಯ ಅಧ್ಯಕ್ಷ ಉಪಾಧ್ಯಕ್ಷರು, ಎಲ್ಲಾ ಹಿರಿಯ ನಿಯಂತ್ರಣ ಅಧಿಕಾರಿಗಳು, ನೌಕರರು ಹಾಗೂ ಅಧಿಕಾರಿ ವರ್ಗದವರು ಪಾಲ್ಗೊಂಡಿದ್ದರು.

Leave a Reply

error: Content is protected !!
LATEST
2086 ಮಂದಿ ಸರ್ಕಾರಿ ನೌಕರರ ಬಳಿಯು ಇವೆ ಬಿಪಿಎಲ್ ಕಾರ್ಡ್‌ಗಳು ! KKRTC ಬಸ್‌ನಲ್ಲಿ ಮರೆತುಹೋಗಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಮರಳಿಸಿ ಮಾನವೀಯತೆ ಮೆರೆದ ಕಂಡಕ್ಟರ್‌ ಅಡ್ಡಾದಿಡ್ಡಿ ಲಾರಿ ಓಡಿಸಿದ ಕೋಪದಲ್ಲಿ ಚಾಲಕನ ಹತ್ಯೆಗೈದ ಐವರ ಬಂಧನ ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ