Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಮಲೆಮಹದೇಶ್ವರಬೆಟ್ಟದಲ್ಲಿ ಹೊಸ ವರ್ಷದ ಮೊದಲೇ ದಿನವೇ ಪ್ರತಿಭಟನೆ ಬಿಸಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹನೂರು:  ಅದು ಪವಾಡ ಪುರುಷ ನೆಲೆಸಿರುವ ಧಾರ್ಮಿಕ ಕ್ಷೇತ್ರ ಆಕ್ಷೇತ್ರದಲ್ಲಿ ಹೊಸ ವರ್ಷ ಆಚರಣೆಗೆ ಸಾವಿರಾರು ಮಂದಿ ಜಮಾಯಿಸಿದ್ದರು. ಈನಡುವೆಯೇ ಈ ಭಾರಿಯ ಹೊಸ ವರ್ಷದ ಮೊದಲ ದಿನವೇ ಅಲ್ಲಿ ವಾಸ ಮಾಡುವ ಜನರು ಪ್ರಾಧಿಕಾರದ ಕಿರುಕುಳ ತಾಳಲಾರದೆ ಪ್ರತಿಭಟನೆಗಿಳಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಚಾಮರಾಜನಗರ ಜಿಲ್ಲೆಯ ಮಲೆ‌ಮಹದೇಶ್ವರ ಬೆಟ್ಟದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಸಾವಿರಾರು ಭಕ್ತರು ಆಗಮಿಸಿದ್ದರೆ, ಮತ್ತೊಂದು ಕಡೆ ದೇವಾಲಯ ಪ್ರಾಧಿಕಾರದ ಕಿರುಕುಳ ತಾಳಲಾರದೆ ಇಲ್ಲಿನ‌ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಮಲೆ‌ಮಹದೇಶ್ವರ ಬೆಟ್ಟದ ದೀಪದ ಒಡ್ಡು ನಲ್ಲಿ 108 ಅಡಿ ಎತ್ತರದ ಬೃಹತ್ ಮಹದೇಶ್ವರ ವಿಗ್ರಹ ನಿರ್ಮಾಣವಾಗುತ್ತಿದೆ. ಪ್ರತಿಮೆ ಲೋಕಾರ್ಪಣೆ ಮಾಡುವ ಸಲುವಾಗಿ ಶ್ರೀ ಮಲೆ‌ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಅಲ್ಲಿನ‌ ಜನರ ಜಮೀನುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದು ಹಾಗೂ ಬೃಹತ್ ಪ್ರತಿಮೆ ಲೋಕಾರ್ಪಣೆ ಮಾಡುವ ಸಲುವಾಗಿ ರಸ್ತೆ ಉದ್ಯಾನವನ ನಿರ್ಮಾಣಕ್ಕೆ ರತ್ರೋ ರಾತ್ರಿ ಜೆಸಿಬಿ ಬಳಸಿಕೊಂಡು ಕಾಮಗಾರಿ ನಡೆಸಿದೆ.

ಇದರಿಂದ ಬೇಸತ್ತ ಸಾರ್ವಜನಿಕರು ರೈತರ ನೆರವಿನೊಂದಿಗೆ ಹೊಸ ವರ್ಷದ ಮೊದಲೇ ದಿನವೇ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗಿಳಿದರು.

ಮಹಿಳೆಯರು ಮತ್ತು ನಿವಾಸಿಗಳಿಗೆ ಪ್ರಾಧಿಕಾರದಿಂದ ಬೆದರಿಕೆ ಹಾಕಲಾಗುತ್ತಿದೆ. ಪ್ರಾಧಿಕಾರದ ಕೆಲಸಕ್ಕೆ ನೆರವಾದವರಿಗೆ ಅನ್ಯಾಯ ಮಾಡಲಾಗುತ್ತಿದೆ ಪ್ರಾಧಿಕಾರದ ವಿರುದ್ದ ಹೋರಾಟ ನಡೆಸಿದರೆ ಸಿಗುವ ಪರಿಹಾರ ಸಿಗೋದಿಲ್ಲ ಅಂತ ಬೆದರಿಕೆ ಹಾಕ್ತಾ ಇದ್ದಾರೆ ಎಂದು ನಿವಾಸಿಗಳು ಆರೋಪಿಸುತ್ತಿದ್ದಾರೆ.

ಒಟ್ಟಿನಲ್ಲಿ ಮಲೆ‌ಮಹದೇಶ್ವರ ಬೆಟ್ಟ ಪ್ರಾಧಿಕಾರವು ಅಭಿವೃದ್ಧಿ ನೆಪಮಾಡಿಕೊಂಡು ಅಲ್ಲಿನ‌ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಮಾಡುವ ತಂತ್ರ ಇದಾಗಿದೆ ಎನ್ನಲಾಗುತ್ತಿದೆ ಈ ಬಗ್ಗೆ ರಾಜ್ಯ ಸರ್ಕಾರ ಎಚ್ಚೆದ್ದುಕೊಂಡು ಸಾರ್ವಜನಿಕರ‌ನೆರವಿಗೆ ಬರಬೇಕಾಗಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ