ಪುತ್ತೂರು: ಕರ್ನಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ.
ಮಂಗಳೂರು ನಗರದ ನಿವಾಸಿ ತೌಹೀದ್ ಎಂಬಾತನೆ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ಸಂಜೆ 6:30ರ ಸುಮಾರಿಗೆ ತೆರಳುತ್ತಿದ್ದ ಬಸ್ ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ ಆರೋಪಿಯು ತನ್ನ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾನೆ.
ಈ ವೇಳೆ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಬಸ್ಸಿನ ತುರ್ತು ನಿರ್ಗಮನ ಕಿಟಕಿಯ ಮೂಲಕ ಹಾರಲು ಪ್ರಯತ್ನಿಸಿದ್ದಾನೆ. ಆಗ ವಿದ್ಯಾರ್ಥಿನಿಯ ತಂದೆ ಮತ್ತು ಸಹ ಪ್ರಯಾಣಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Related

 










