NEWSನಮ್ಮರಾಜ್ಯಬೆಂಗಳೂರು

ಜುಲೈ 22ರಂದು ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ : ಜಗದೀಶ್‌ ವಿ.ಸದಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಅಧಿಕಾರ ಸ್ವೀಕರಿಸುವ ಪದಗ್ರಹಣ ಸಮಾರಂಭವನ್ನು ಜುಲೈ 22ರ ಶನಿವಾರ ನಗರದ ಪ್ಯಾಲೇಸ್ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ತಿಳಿಸಿದ್ದಾರೆ.

ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡು ಕಂಡ ಹೆಸರಾಂತ ಕಲಾವಿದ ಹಾಗೂ ಮಾಜಿ ಶಾಸಕರು ಆಗಿರುವ ಮುಖ್ಯಮಂತ್ರಿ ಚಂದ್ರು ಅವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಹೀಗಾಗಿ ಅವರ ಪದಗ್ರಹಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುವುದು ಎಂದು ತಿಳಿಸಿದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಜ್ಯ ಸಭಾ ಸದಸ್ಯ ಸಂದೀಪ್, ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹಾಗೂ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಅವರ ಸಮ್ಮುಖದಲ್ಲಿ ಈ ಪದಗ್ರಹಣ ಸಮಾರಂಭ ನಡೆಯಲಿದೆ ಎಂದರು.

ಇನ್ನು ಇದೇ ಸಂದರ್ಭದಲ್ಲಿ ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವ ಬಿ. ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿ ಗೌಡರ ಅವರು ಸಹ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯ ಮಾಧ್ಯಮ ವಕ್ತಾರೆ ಉಷಾ ಮೋಹನ್ ಮಾತನಾಡಿ, ಈ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಹಾಗೂ ಪಕ್ಷದ ಈ ಪರ್ಯಾಯ ರಾಜಕೀಯ ಆಂದೋಲನದಲ್ಲಿ ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ