ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ನೂತನ ಕಚೇರಿಯನ್ನು ಗಣೇಶ ಚತುರ್ಥಿಯ ದಿನವಾದ ಶುಕ್ರವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು.
ಇಲ್ಲಿಯವರೆಗೆ ಗಾಂಧಿನಗರದಲ್ಲಿರುವ ರೈತ ಸಂಘದ ಕಚೇರಿಯಲ್ಲೇ ಕೂಟಕ್ಕೆ ಸಂಬಂಧಿಸಿದ ಎಲ್ಲ ಕೆಲಸ ಕಾರ್ಯಗಳು ನಡೆಯುತ್ತಿದ್ದವು. ಅದು ತಾತ್ಕಾಲಿವಾಗಿದ್ದರಿಂದ ಇಂದು ಅಧಿಕೃತವಾಗಿ ವಿಲ್ಸನ್ಗಾರ್ಡನ್ನಲ್ಲಿ ನೂತನ ಕಚೇರಿಯನ್ನು ತೆರೆಯಲಾಗಿದೆ.
ಆದರೆ, ಕಚೇರಿ ಉದ್ಘಾಟನೆಯನ್ನು ತುಂಬಾ ಸಿಂಪಲ್ಆಗಿ ನೆರವೇರಿಸಲಾಗಿದೆ. ಹೀಗಾಗಿ ಸಾರಿಗೆಯ ಬಹಳಷ್ಟು ನೌಕರರಿಗೆ ಕಚೇರಿ ಉದ್ಘಾಟನೆಯ ವಿಷಯವೇ ತಿಳಿದಿಲ್ಲ. ಕನಿಷ್ಠಪಕ್ಷ ಒಬ್ಬರು ಸಾಹಿತಿಯೋ, ಹೋರಾಟಗಾರರನ್ನೋ ಇಲ್ಲ ನಿವೃತ್ತ ಸಾರಿಗೆಯ ಅಧಿಕಾರಿಯನ್ನಾದರೂ ಕರೆದು ಅವರ ಮೂಲಕ ಕಚೇರಿ ಉದ್ಘಾಟಿಸಿದ್ದರೆ ಒಂದು ಮರೆಯಲಾಗದ ಸವಿ ನೆನಪಾಗುತ್ತಿತ್ತು ಎಂದು ಹಲವು ನೌಕರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು 1.30 ಲಕ್ಷ ನೌಕರರ ಹಿತದೃಷ್ಟಿಯಿಂದ ಹುಟ್ಟಿಕೊಂಡಿರುವ ಕೂಟದ ಕಚೇರಿಯನ್ನು ಸಿಂಪಲ್ಆಗಿ ಉದ್ಘಾಟಿಸಿರುವುದಕ್ಕೂ ಹಲವು ಕಾರಣಗಳು ಇರಬಹುದು. ಹಾಗಂತ ಕಾರಣಗಳನ್ನೇ ಮುಂದಿಟ್ಟುಕೊಂಡು ಕಚೇರಿಯ ಉದ್ಘಾಟನೆ ವಿಷಯವನ್ನು ನಮ್ಮ ನೌಕರರಿಗೆ ತಿಳಿಸದೆ ಹೋದರೆ ಹೇಗೆ? ಇದು ತಪ್ಪಲ್ಲವೇ ಎಂದು ದೂರದೂರುಗಳಿಗೆ ಮುಷ್ಕರದ ಸಮಯದಲ್ಲಿ ವರ್ಗಾವಣೆಗೊಂಡಿರುವ ಹಲವು ನೌಕರರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಅದು ಏನೆ ಇರಲಿ ಸಾರಿಗೆ ನೌಕರರಿಗೆ ಒಳ್ಳೆದನ್ನು ಮಾಡುವ ಉದ್ದೇಶದಿಂದ ಹುಟ್ಟಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟವು ನಿತ್ಯ ನೌಕರರ ಪಾಲಿನ ದೈವವಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಲು ನಿರತವಾಗಲಿ.
ನೌಕರರ ಹಿತ ಕಾಯುವುದು ಕೂಟದ ಪ್ರತಿಯೊಬ್ಬ ಪದಾಧಿಕಾರಿಯ ಕರ್ತವ್ಯವಾಗಿದ್ದು ಅದನ್ನು ಮರೆಯದೆ ಪಾಲಿಸಬೇಕು. ಆಗ ಮಾತ್ರ ಕೂಟಕ್ಕೂ ಮತ್ತು ಕೂಟದ ಪದಾಧಿಕಾರಿಗಳು ಒಳ್ಳೆ ಹೆಸರು ಬರಲು ಸಾಧ್ಯ ಎಂಬುದನ್ನು ನೆನಪಿಟ್ಟಿಕೊಳ್ಳಬೇಕಾಗಿದೆ.

ಕೂಟದಿಂದ ನೌಕರರಿಗೆ ಒಳ್ಳೆದಾಗುವ ಯಾವ ಕೆಲಸವನ್ನೇ ಮಾಡಿದರು ಆ ಕೆಲಸ ನೌಕರರಿಗೂ ತಿಳಿಸುವುದು ನಿಮ್ಮ ಜವಾಬ್ದಾರಿಗಳಲ್ಲಿ ಒಂದಾಗಿರುತ್ತದೆ. ಇಲ್ಲದಿದ್ದರೆ ಕೂಟ ಮತ್ತು ಕೂಟದ ಪದಾಧಿಕಾರಿಗಳ ಮೇಲೆ ಅನುಮಾನ ಮೂಡುತ್ತದೆ. ಒಮ್ಮೆ ಹೆಸರು ಹೋದರೆ ಅದನ್ನು ಮತ್ತೆ ಸಂಪಾದಿಸಲು ಸಾಧ್ಯವೆ ಇಲ್ಲ ಎಂಬುದನ್ನು ಕೂಟದ ಪದಾಧಿಕಾರಿಗಳು ಮರೆಯಬಾರದು.
ಇಷ್ಟೆಲ್ಲವನ್ನು ಏಕೆ ಹೇಳುತ್ತಿದ್ದೇವೆ ಎಂದರೆ ಕೂಟದ ಪದಾಧಿಕಾರಿಗಳಲ್ಲಿ ಕೆಲವರಿಗೆ ಉದಾಸೀನತೆ ಭಾವನೆ ತುಸು ಹೆಚ್ಚಾಗೆ ಇದೆ ಎಂಬ ಮಾತುಗಳು ನೌಕರರಿಂದ ಕೇಳಿ ಬರುತ್ತಿವೆ. ಹೀಗಾಗಿ ಮುಂದೆ ಇಂಥ ಉದಾಸೀನತೆ ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯಲ್ಲಿ ಇರಬಾದರು. ಇದನ್ನು ಸದಾ ಒಬ್ಬ ಮುಖಂಡನಾದವನು ಪಾಲಿಸಬೇಕು. ಈ ಹಿಂದೆ ಹೇಗಿದ್ದೀರಿ ಎಂಬುವುದು ಇಲ್ಲಿ ಮುಖ್ಯವಲ್ಲ ಮುಂದೆ ಹೇಗಿರುತ್ತೀರಿ ಎಂಬುವುದು ಬಹಳ ಮುಖ್ಯವಾಗುತ್ತದೆ.
ನೊಂದ ನೌಕರರ ಕಣ್ಣೀರೊರೆಸುವ ಸ್ಥಾನದಲ್ಲಿ ನಾವಿದ್ದೇವೆ. ಆ ನಿಟ್ಟಿನಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರದ ಮೇಲು ಮುಂದಿನ ಆಗುಹೋಗುಗಳು ಇರುತ್ತವೆ ಎಂಬುವುದು ತಿಳಿದಿರಬೇಕು. ಇದು ಆಟದ ಮೈದಾನವಲ್ಲ ಮೈದಾನರೀತಿ ಕಾಣುತ್ತದೆ ಅಷ್ಟೆ, ಹೀಗಾಗಿ ನಾವು ಇಲ್ಲಿ ಆಟವಾಡಬಾರದು ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ನ್ಯಾಯಾಲಯದ ರೀತಿ ಕೆಲಸ ಮಾಡಬೇಕು ಎಂಬುದನ್ನು ಅರಿತುಕೊಂಡು ನಡೆಯಬೇಕಿದೆ.
Related


You Might Also Like
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...