NEWSಕೃಷಿಬೆಂಗಳೂರು

ಬೆಂಗಳೂರಿನಲ್ಲಿ ನಿರಂತರ ಮಳೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆಯಿಂದ ಶುರುವಾದ ಜಿಟಿಜಿಟಿ ಮಳೆ ಒಂದಲ್ಲ, ಎರಡಲ್ಲ ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದೆ. ನದಿಯಂತೆ ರಸ್ತೆಯಲ್ಲೇ ನೀರು ಹರಿದಾಡುತ್ತಿದೆ. 2 ಕಿಲೋ ಮೀಟರ್​ ದೂರ ಸಂಚಾರ ಸಾಧ್ಯವಾಗದಷ್ಟು ನರಕ ದರ್ಶನವನ್ನು ವಾಹನ ಸವಾರರಿಗರ ಮಾಡಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಳೆಯ ಆರ್ಭಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜೋರಾಗಿದೆ. ಇಂದು ಬೆಳಗ್ಗೆಯಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.

ನಿರಂತವಾಗಿ ಸುರಿದ ಮಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಅನಾಹುತಗಳು ಸಂಭವಿಸಿವೆ. ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಐಟಿ ಬಿಟಿ ಮತ್ತು ಖಾಸಗಿ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡಿ ಎಂದು ಬಹುತೇಕ ಎಲ್ಲ ಕಂಪನಿಗಳೂ ಘೋಷಿಸಿವೆ.

ಬೆಂಗಳೂರು ನಗರದಲ್ಲಿ ನಿರಂತರ ಮತ್ತು ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್‌ ಹೊರಡಿಸಿದೆ. ಹೀಗಾಗಿ ಬೆಂಗಳೂರಿನಲ್ಲಿರುವ ಐಟಿ, ಬಿಟಿ ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಎಲ್ಲ ಉದ್ಯೋಗಿಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ನಾವು ಆದ್ಯತೆ ನೀಡುತ್ತಿದ್ದೇವೆ.

ಪ್ರವಾಹ, ಜಲಾವೃತ ಮತ್ತು ಸಂಚಾರ ದಟ್ಟಣೆಯಿಂದಾಗಿ ಸಾರಿಗೆ ವ್ಯವಸ್ಥೆಗಳು ಅಸ್ತವ್ಯಸ್ತವಾಗಬಹುದು, ಕಚೇರಿ ಆವರಣಕ್ಕೆ ಪ್ರಯಾಣಿಸುವುದು ಅಪಾಯವನ್ನು ಉಂಟು ಮಾಡಬಹುದು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ, IT, BT ಮತ್ತು ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ 16ನೇ ಅಕ್ಟೋಬರ್ 2024ರಂದು ಮನೆಯಿಂದ ಕೆಲಸ ಮಾಡಲು (WFH) ಅನುಮತಿ ನೀಡುವಂತೆ ಶಿಫಾರಸು ಮಾಡಲಾಗಿದೆ.

ಮತ್ತೊಂದು ಕಡೆ ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳು ಕೂಡ ಶಾಲೆಗೆ ಬರಲು ಕಷ್ಟ ಎದುರಾಗಿದೆ. ಹೀಗಾಗಿ ರಾಜಧಾನಿಯ ಶಾಲೆಗಳಿಗೆ ರಜೆ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ವ್ಯಾಪ್ತಿಯ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿ ಬೆಂಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್