NEWSಕೃಷಿನಮ್ಮರಾಜ್ಯ

ಮಂಡ್ಯ-ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ: ರೈತರ, ಸಿಎಂ ಮುಖದಲ್ಲಿ ಮಂದಹಾಸ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಈ ವರ್ಷದ ವರುಣ ರಾಜ್ಯದಲ್ಲಿ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆಗಳು ತುಂಬುತ್ತಿವೆ. ಇದರಿಂದ ಅನ್ನದಾತರಿಗಂತೂ ಸಂತಸ ಮನೆ ಮಾಡಿದ್ದು, ಉತ್ತಮ ಬೆಳೆ ತೆಗೆಯುವುದಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಜತೆಗೆ ಈ ಬಾರಿ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಸರ್ಕಾರಕ್ಕೂ ಖುಷಿಯ ವಿಷಯವಾಗಿದೆ.

ಹೌದು! ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದೆ ಹೀಗಾಗಿ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ನೀರು ಹರಿದು ಬರುತ್ತಿದೆ. ಇದು ರೈತರ ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮುಖದಲ್ಲೂ ಮಂದಹಾಸ ಮೂಡುವಂತೆ ಮಾಡಿದೆ.

ರಾಜ್ಯದಲ್ಲಿ ಕಾವೇರಿ ಒಡಲನ್ನೇ ನಂಬಿಕೊಂಡೇ ಕೋಟ್ಯಂತರ ಕುಟುಂಬಗಳು ಜೀವನ ನಡೆಸುತ್ತಿವೆ. ಕೃಷಿ, ಕುಡಿಯಲು ಕಾವೇರಿಯನ್ನೇ ನಂಬಿರುವ ಕೋಟ್ಯಂತರ ಕುಟುಂಬಗಳಿವೆ. ಆದರೆ ಕಳೆದ ವರ್ಷ ಕಾವೇರಿ ನೀರಿನ ಅಭಾವ ಉಂಟಾಗಿ ಬೆಂಗಳೂರಿನ ಜನತೆಯೂ ತತ್ತರಿಸಿ ಹೋಗಿದ್ದರು. ಈ ವರ್ಷದ ವರುಣನ ಅಬ್ಬರ ನೋಡಿದರೆ ಕೆಆರ್​ಎಸ್ ಅತೀ ಶೀಘ್ರದಲ್ಲೇ ತುಂಬಲಿದೆ ಎಂಬ ಭರವಸೆ ಮೂಡುತ್ತಿದೆ.

ಇನ್ನು ಇಂದಿನ ಕೆಆರ್‌ಎಸ್ ನೀರಿನ ಮಟ್ಟ ತಿಳಿಯುವುದಾದರೆ:
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 84.95 ಅಡಿ
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 13.142 ಟಿಎಂಸಿ
ಒಳ ಹರಿವು – 1,423 ಕ್ಯೂಸೆಕ್
ಹೊರ ಹರಿವು – 444 ಕ್ಯೂಸೆಕ್

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ