NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಒಕ್ಕಲಿಗರ ಮೀಸಲಾತಿ ಶೇ.4ರಿಂದ ಶೇ.12ಕ್ಕೆ  ಹೆಚ್ಚಿಸಿ: KSRTC ಒಕ್ಕಲಿಗ ಅಧಿಕಾರಿಗಳು, ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ, ಪದಾಧಿಕಾರಿಗಳ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಕ್ಕಲಿಗರ ಮೀಸಲಾತಿ ಶೇ.4ರಿಂದ ಶೇ.12ಕ್ಕೆ ಹೆಚ್ಚಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಒಕ್ಕಲಿಗ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹರೀಶ್ ಪಿ.ಗೌಡ ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಎಸ್ ಸಿ ಮತ್ತು ಎಸ್ ಟಿ ವರ್ಗಗಳ ಮೀಸಲಾತಿಯನ್ನು ಹೆಚ್ಚಳ ಮಾಡಿರುವುದಕ್ಕೆ ರಾಜ್ಯ ಸರಕಾರವನ್ನು ಅಭಿನಂದಿಸುತ್ತೇವೆ. ಈ ವರ್ಗಗಳ ಮಿಸಲಾತಿ ಹೆಚ್ಚಳ ಮಾಡಿರುವುದನ್ನು ಇಡೀ ಒಕ್ಕಲಿಗ ಸಮುದಾಯ ಸ್ವಾಗತ ಮಾಡುತ್ತದೆ. ಹಾಗೆಯೇ ಒಕ್ಕಲಿಗ ಸಮುದಾಯ ಮೀಸಲಾತಿಯನ್ನು ಪಡೆಯುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ 3ಎ ಮೀಸಲಾತಿಯನ್ನು ಶೇ.4ರಿಂದ ಶೇ.12ಕ್ಕೆ ಹೆಚ್ಚಳ ಮಾಡಬೇಕೆಂದು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ.

ಒಕ್ಕಲಿಗ ಸಮುದಾಯ ರಾಜ್ಯದ ಜನಸಂಖ್ಯೆಯಲ್ಲಿ 80ರಿಂದ 90ಲಕ್ಷದಷ್ಟಿದ್ದು ಒಟ್ಟು ಜನಸಂಖ್ಯೆಯಲ್ಲಿ ಶೇ.17ರಷ್ಟಿದೆ. 3ಎ ಅಡಿಯಲ್ಲಿ ಒಕ್ಕಲಿಗ ಮಾತ್ರವಲ್ಲದೆ ರೆಡ್ಡಿ, ಬಲಿಜ, ಕೊಡವ, ಬಂಟ ಸೇರಿದಂತೆ 12 ಜಾತಿಗಳು ಸೇರಿವೆ. ಮೀಸಲಾತಿ ಕೂಗು ನಿನ್ನೆ ಮೊನ್ನೆಯದಲ್ಲ. ದಶಕಗಳಿಂದ ಒತ್ತಾಯ ಕೇಳಿ ಬರುತ್ತಿದೆ. “ಒಕ್ಕಲಿಗ ಒಕ್ಕದಿರೆ ಬಿಕ್ಕುವುದು ಜಗವೆಲ್ಲಾ” ಎಂಬ ನಾಣ್ಣುಡಿಯಂತೆ ಒಕ್ಕಲಿಗ ಕೃಷಿಯನ್ನು ಕೈಬಿಟ್ಟರೆ ಆಹಾರಕ್ಕೆ ಹಾಹಾಕಾರ ಉಂಟಾಗುತ್ತದೆ. ಆದ್ದರಿಂದ ಕೃಷಿಯನ್ನೇ ಅವಲಂಬಿಸಿರುವ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿಯನ್ನು ಶೇ.12ಕ್ಕೆ ಹೆಚ್ಚಳ ಮಾಡಿದರೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿವಿಧ ಸಮುದಾಯಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬೇಡಿಕೆ ಇಟ್ಟಿರುವಾಗ ಒಕ್ಕಲಿಗ ಸಮುದಾಯದಲ್ಲೂ ಶೇ.80ರಷ್ಟು ಬಡವರಿದ್ದಾರೆ. ಇವರೆಲ್ಲರೂ ಕೃಷಿಯನ್ನೇ ಕಾಯಕವನ್ನಾಗಿ ಅವಲಂಬಿಸಿಕೊಂಡು ಬಂದಿದ್ದಾರೆ. ಅದರಲ್ಲೂ ಒಣ ಬೇಸಾಯವನ್ನೇ ನೆಚ್ಚಿಕೊಂಡಿದ್ದಾರೆ. ಕೃಷಿ ದುಬಾರಿಯಾಗುತ್ತಿದ್ದು, ಇತ್ತ ಕೃಷಿಯನ್ನು ಬಿಡಲಾರದೆ ಅತ್ತ ಪರ್ಯಾಯ ಮಾರ್ಗವೂ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾನೆ.

ಕೃಷಿ ಉತ್ಪನ್ನಗಳಿಗೆ ಸಮರ್ಪಕ ಮಾರುಕಟ್ಟೆ ಇಲ್ಲದೆ ಹೈರಾಣಾಗಿದ್ದಾನೆ. ಶಿಕ್ಷಣ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ಪಡೆಯುವುದು ಕಷ್ಟಕರವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ತೇರ್ಗಡೆಯಾಗುವುದು ಗಗನ ಕುಸುಮವಾಗಿದೆ. ಮೀಸಲಾತಿ ಲಭ್ಯವಾದರೆ ಕೃಷಿಕರ ಮಕ್ಕಳೂ ಉನ್ನತ ಸ್ಥಾನಗಳಿಗೆ ಏರಲು ಅವಕಾಶವಾಗುತ್ತದೆ ಎಂದು ತಿಳಿಸಿದ್ದಾರೆ.

ಮೀಸಲಾತಿ ಪ್ರಮಾಣ ಶೇ.50 ಮೀರಿರುವ ಉದಾಹರಣೆಗಳಿವೆ. ಹರಿಯಾಣ-ಶೇ.70, ತಮಿಳುನಾಡು-ಶೇ.69, ರಾಜಸ್ಥಾನ-ಶೇ. 54, ಮಹಾರಾಷ್ಟ್ರ-ಶೇ.68ರಷ್ಟು ಮಿಸಲಾತಿ ಕಲ್ಪಿಸಿವೆ. ವೈಜ್ಞಾನಿಕ ದಾಖಲೆಗಳು ಲಭ್ಯವಿದ್ದಲ್ಲಿ ರಾಜ್ಯ ಸರಕಾರಗಳು ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಬಹುದು ಎಂಬ ಅಭಿಪ್ರಾಯವನ್ನು ಸುಪ್ರೀಂಕೋರ್ಟ್ ವ್ಯಕ್ತಪಡಿಸಿದೆ. ಹಾಗಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಯಾವುದೇ ಕಾನೂನು ತೊಡಕು ಇಲ್ಲ ಮತ್ತು ಇದರಿಂದ ಯಾವುದೇ ಸಮಾಜಕ್ಕೂ ಅನ್ಯಾಯವಾಗುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ಪ್ರವರ್ಗ 3ಎ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಕಾರ್ಯಪ್ರವೃತ್ತರಾಗಬೇಕು.

ಮುಂಬರುವ ಸಾರ್ವತ್ರಿಕ ಚುನಾವಣೆಯ ಒಳಗಾಗಿ ಮೀಸಲಾತಿ ಹೆಚ್ಚಳ ಮಾಡುತ್ತಾರೆ ಎಂಬ ಅದಮ್ಯ ವಿಶ್ವಾಸ ಹೊಂದಲಾಗಿದೆ. ಒಕ್ಕಲಿಗರ ಮೀಸಲಾತಿ ಹೆಚ್ಚಳ ಮಾಡಲು ಸರಕಾರದ ಮೇಲೆ ಒತ್ತಡ ಹೇರುವಂತೆ ಎಲ್ಲ ಒಕ್ಕಲಿಗ ಸಚಿವರು, ಶಾಸಕರು, ಸಂಸದರು ಮತ್ತು ಮೂರೂ ಪಕ್ಷಗಳ ಒಕ್ಕಲಿಗ ಮುಖಂಡರು ಮತ್ತು ಸಮುದಾಯದ ನಾಯಕರಿಗೆ ಪತ್ರ ಬರೆಯಲಾಗಿದೆ. ಮುಂಬರುವ ದಿನಗಳಲ್ಲಿ ಸಮುದಾಯದ ಗುರುವರ್ಯರ ಮಾರ್ಗದರ್ಶನ ಮತ್ತು ಮುಖಂಡರ ನೇತೃತ್ವದಲ್ಲಿ ಚಳವಳಿಯನ್ನು ರೂಪಿಸಲಾಗುವುದು ಎಂದು ಹರೀಶ್ ಪಿ.ಗೌಡ ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ