NEWSನಮ್ಮಜಿಲ್ಲೆನಮ್ಮರಾಜ್ಯ

ಶೇ.4ರಷ್ಟು ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಿಸಿ: ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜುಲೈ 1 ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿ ಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶಹೊರಡಿಸಿದ್ದು, ಅದೇ ರೀತಿ ರಾಜ್ಯ ಸರ್ಕಾರವು ಕೂಡ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿದಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.

ಈ ಸಂಬಂಧ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿದೆ.

ಪ್ರಸ್ತುತ ಕೇಂದ್ರ ಸರ್ಕಾರವು ಈ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿ 01-07-2023ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಆದ್ದರಿಂದ ತಾವು ಕೂಡ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 01-02-2023ರಿಂದ ಪೂರ್ವಾನ್ವಯವಾಗುವಂತೆ ಶೇ.4ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪಾದಲ್ಲಿ ನೀಡಿ ಆದೇಶ ಹೊರಡಿಸಲು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಮನವಿ ಮಾಡಿದ್ದಾರೆ.

 

Leave a Reply

error: Content is protected !!
LATEST
KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ