NEWSನಮ್ಮರಾಜ್ಯರಾಜಕೀಯ

ವೆಂಟಿಲೇಟರ್ ಕೊರತೆಯಿಂದ ಕೊರೊನಾ ಸೋಂಕಿತರ ಸಾವು ಹೆಚ್ಚಳ: ಸಿದ್ದು ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ  ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಇದನ್ನು ಸರಿಪಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಈ ನಡುವೆ ಸಚಿವ ಡಾ. ಹರ್ಷವರ್ಧನ್‌  ಪ್ರಕಾರ ಕೊರೊನಾ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಹೃದಯಹೀನ‌ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕ್ರಿಯ ಸೋಂಕು ಪ್ರಕರಣಗಳು 57,396. ಲಭ್ಯ ಇರುವ ವೆಂಟಿಲೇಟರ್ ‌ಗಳು ಕೇವಲ 801. ಒಟ್ಟು ರಾಜ್ಯದ ಸ್ಥಿತಿ ಇನ್ನೂ ಚಿಂತಾಜನಕ. ಇಂಥ ಸ್ಥಿತಿಯಲ್ಲೂ ಪ್ರಧಾನಿ ಮೋದಿ ಸರ್ಕಾರಕ್ಕೆ ರಫ್ತು ಹೆಚ್ಚಿಸುವ ಚಿಂತೆ. ರಾಜ್ಯದಲ್ಲಿ ಕೊರೊನಾ ಅನಿಯಂತ್ರಿತವಾಗಿ ಹರಡುವುದಕ್ಕೂ, ಸರ್ಕಾರದ ಭ್ರಷ್ಟಾಚಾರಕ್ಕೂ ನೇರವಾದ ಸಂಪರ್ಕ ಇದೆ ಎಂದು ಆರೋಪಿಸಿದ್ದಾರೆ.

ಈ ಕಾರಣಕ್ಕಾಗಿ ನಾವು ಅಭಿಯಾನದ ಮೂಲಕ ಜನರ ಬಳಿ ಹೋಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದಿರುವ ಅವರು ಮುಖ್ಯಮಂತ್ರಿ ಜನರ ಕಷ್ಟದ ಕಾಲದಲ್ಲಿ ವಿಪಕ್ಷಗಳು ಸಹಕಾರ ನೀಡಬೇಕು, ಆರೋಪ ಮಾಡುವುದು ಸರಿಯೇ ಎಂದು ಕೇಳ್ತಿದ್ದಾರೆ. ಇಂತಹ ಸಾವು-ನೋವಿನ  ಕಷ್ಟ ಕಾಲದಲ್ಲಿ ಜನರ ಜೀವ ಉಳಿಸಬೇಕೇ ಹೊರತು ಭ್ರಷ್ಟಾಚಾರ ಮಾಡುವುದು ಸರಿಯೇ? ಎಂದು ನಾವು ಕೇಳುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ನಿಮ್ಮ ಆತ್ಮಸಾಕ್ಷಿಯನ್ನು ಕೇಳಿ ಹೇಳಿ. ನಮ್ಮಿಂದ ಸಹಕಾರ ನಿರೀಕ್ಷಿಸುವ ಕೇಂದ್ರ  ಸರ್ಕಾರ, ಕೊರೊನಾ ಕಾಲದಲ್ಲಿ ಮಧ್ಯಪ್ರದೇಶದ ನಮ್ಮ ಸರ್ಕಾರಕ್ಕೆ ಬಿಜೆಪಿ ಯಾಕೆ‌ ಸಹಕಾರ ಕೊಡಲಿಲ್ಲ. ರಾಜಸ್ತಾನದ‌ ನಮ್ಮ ಸರ್ಕಾರವನ್ನು ಉರುಳಿಸಲು ಹೊರಟದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿತ್ತು ಎನ್ನುವ ಕಾರಣಕ್ಕೆ ಸಹಿಸಿಕೊಂಡು ಸುಮ್ಮನಿದ್ದೆವು. ಈಗ ಕೊರೊನಾ ಸಾವು-ನೋವುಗಳಲ್ಲಿ ಮಹಾರಾಷ್ಟ್ರ-ತಮಿಳುನಾಡುಗಳನ್ನು ಮೀರಿಸಿ ಕರ್ನಾಟಕ  ನಂಬರ್ ಒನ್ ಆಗಲು ಹೊರಟಿದೆ.  ಈಗಲೂ ಸುಮ್ಮನಿದ್ದರೆ ಜನದ್ರೋಹ‌ ಆಗಲಾರದೇ ಎಂದು ಮೊಟಕಿದ್ದಾರೆ.

ಬೆಡ್ ಇಲ್ಲ, ಔ಼ಷಧಿ,ಊಟ ಕೊಡ್ತಿಲ್ಲ, ಆಂಬುಲೆನ್ಸ್ ಇಲ್ಲ, ವೆಂಟಿಲೇಟರ್ ಇಲ್ಲ. ಬೀದಿಯಲ್ಲಿಯೇ ಹೆಣವಾದರು, ಸತ್ತಮೇಲೆಯೂ ದಪನ ಮಾಡುವವರಿಲ್ಲ ಎನ್ನುವುದೇ ಮಾಧ್ಯಮಗಳಲ್ಲಿ ನಿತ್ಯ ಸುದ್ದಿ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ,1,29,287ಕ್ಕೆ  ಸಾವಿನ ಸಂಖ್ಯೆ 2420ಕ್ಕೆ ಏರಿದೆ.

ನಾವು ಸುಮ್ಮನಿರಬೇಕಾ?  ರಾಜ್ಯದ ಜನ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಪೂರೈಕೆ ಯಂತ್ರಗಳಿಲ್ಲ, ಊಟ-ತಿಂಡಿ ಇಲ್ಲ, ಉದ್ಯೋಗ ಇಲ್ಲ ಎಂದು ಗೋಳಾಡುತ್ತಿದ್ದಾರೆ.

ರಾಜ್ಯ ಸರ್ಕಾರಕ್ಕೆ ಜನರ ಕಷ್ಟ ಕಾಣಲಿಲ್ಲ, ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಗಳಿಸಬಹುದಾದ ದುಡ್ಡು‌‌ಕಾಣ್ತು. ಅಕ್ರಮದ ಬಗ್ಗೆ

ಸಿಎಂ ಅವರನ್ನು ಪ್ರಶ್ನಿಸಿದರೆ  “ಮಾಹಿತಿ ಕೊಡಿ’’ ಎನ್ನುತ್ತಾರೆ, ದಾಖಲೆಗಳನ್ನು ಬಿಡುಗಡೆ ಮಾಡಿದರೆ ಅದು ಸುಳ್ಳು ಎನ್ನುತ್ತಾರೆ.  ತನಿಖೆ ಮಾಡಿಸಿ ಎಂದರೆ ಸುಳ್ಳಿನ ಬಗ್ಗೆ ತನಿಖೆ ಯಾಕೆ ಎಂದು ಕೇಳ್ತಾರೆ. ಹೀಗಿರುವಾಗ ಜನರ ಬಳಿ ಹೋಗದೆ ನಮಗೆ  ಬೇರೆ ದಾರಿ ಏನಿದೆ ಎಂದು ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!