ಬೆಂಗಳೂರು: ಆಪರೇಷನ್ ಸಿಂಧೂರ ಪ್ರತೀಕಾರದ ಬೆನ್ನಲ್ಲೇ ದೇಶಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮತ್ತೊಂದೆಡೆ ಪ್ರಸ್ತುತ ಐಪಿಎಲ್ ಮ್ಯಾಚ್ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಭಾರಿ ಸೆಕ್ಯುರಿಟಿ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹೀಗಾಗಿ ಪ್ರಮುಖ ಹಾಗೂ ಜನಕೇಂದ್ರಿತ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು, ಇದೀಗ ಪೊಲೀಸರು ಎಲ್ಲ ಕಡೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಐಪಿಎಲ್ ಪಂದ್ಯ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಪ್ರತೀ ಗೇಟ್ ಬಳಿಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೂರು ಪಾಳಿಗಳಲ್ಲಿ 70ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 13ರಂದು ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಹೀಗಾಗಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Related

Megha