NEWSನಮ್ಮಜಿಲ್ಲೆನಮ್ಮರಾಜ್ಯ

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಕರೆ ನೀಡರುವ ಅನಿರ್ದಿಷ್ಟಾವಧಿ ಮುಷ್ಕರ ಇಂದಿನಿಂದ ಆರಂಭವಾಗಿದ್ದು, ರೈತರ ಕೆಲಸ ಕಾರ್ಯಗಳು ಸ್ಥಗಿತಗೊಂಡಿವೆ.

ಪಟ್ಟಣದ ತಾಲೂಕು ಆಡಳಿತ ಕಾರ್ಯ ಸೌಧದ ಆವರಣದಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸಂಘದ ಜಿಲ್ಲಾಧ್ಯಕ್ಷ ಹರೀಶ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಈ ವೇಳೆ ಮಾತನಾಡಿದ ಮಂಡ್ಯ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಗ್ರಾಮ ಆಡಳಿತ ಅಧಿಕಾರಿಗಳ ಮೂರು ಬೇಡಿಕೆಗಳ ಈಡೇರಿಸಬೇಕು ಎಂದು ಆಗ್ರಹಿಸಿದರು.

ಮೊಬೈಲ್ ಆಫ್ ಬಳಕೆ, ವೆಬ್ ಪೇಜ್ ಸಮಸ್ಯೆ ಸೇರಿದಂತೆ, ರಜಾ ದಿನಗಳಲ್ಲಿಯೂ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೆ ಸದಾ ಮಾನಸಿಕ ಒತ್ತಡಗಳ ನಡುವೆ ಕೆಲಸ ಮಾಡುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಮಾನವೀಯ ನೆಲಗಟ್ಟಿನ ಆಧಾರದ ಮೇರೆಗೆ ಬಗೆಹರಿಸಿ ಅನುಕೂಲ ಮಾಡಿ ಕೊಡಬೇಕು ಎಂದು ಒತ್ತಾಯಿಸಿದರು.

ಇನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೇವಾ ಮುಂಬಡ್ತಿ ನೀಡುವುದು, ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವುದು ಸೇರಿದಂತೆ ರಾಜ್ಯದಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ 5000ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಹರೀಶ್ ಆಗ್ರಹಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಚಂದ್ರಕಲಾ ಅವರು ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ತಮ್ಮ ಬೆಂಬಲವನ್ನು ಸೂಚಿಸಿದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!
LATEST
ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ