ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಾದ ಸಮಾಜಿಕ ಅಂತರ, ಮಾಸ್ಕ್ ಬಳಕೆ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಿಕೊಂಡು 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆಯನ್ನು ಸ್ವಿಕರಿಸಿದರು. ನಂತರ ಪೆರೇಡ್ ವೀಕ್ಷಣೆ ನಡೆಸಿದರು. ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲವನ್ನು ನಡೆಸಲಾಯಿತು. ಪಥ ಸಂಚಲನದಲ್ಲಿ ಜಿಲ್ಲಾ ಶಸ್ತ್ರಸ ಪೊಲೀಸ್ ಪಡೆ, ಉಪವಿಭಾಗದ ಪೊಲೀಸ್ಪಡೆ, ಜಿಲ್ಲಾ ಮಹಿಳಾ ಪೊಲೀಸ್ಪಡೆ, ಪುರುಷರ ಗೃಹ ರಕ್ಷಕ ದಳ ಹಾಗೂ ಮಹಿಳಾ ಗೃಹರಕ್ಷಕ ದಳಗಳಿಂದ ಪಥ ಸಂಚಲನವನ್ನು ನಡೆಸಲಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೇಂದ್ರ ಲೋಕಸೇವಾ ಆಯೋಗದಲ್ಲಿ ಉತ್ತೀರ್ಣರಾಗಿ ಭಾರತೀಯ ಆಡಳಿತ ಸೇವಗೆ ಆಯ್ಕೆಯಾದವರು ಮತ್ತು ಪಿಯುಸಿ, ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿದ ಜಿಲ್ಲೆಯ ಮಕ್ಕಳನ್ನು ನಗದು ನೀಡಿ ಸನ್ಮಾನೊಸಲಾಯಿತು.
ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳನ್ನು ಒದಗಿಸಿದ ಆರೋಗ್ಯ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಕೆ.ಎಸ್ ಅರ್.ಟಿ.ಸಿ ಸಿಬ್ಬಂದಿಯಾದ ಕೊರೊನಾ ವಾರಿಯರ್ಸಗಳ ಜತೆಗೆ ಕೋವಿಡ್-19 ನಿಂದ ಗುಣಮುಖರಾದವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯಿಂದ ರೈತರ ಬೆಳೆ ಸಮೀಕ್ಷೆ ಕುರಿತ ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail