ಇಸ್ಲಾಮಾಬಾದ್: ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಿಂದ ಪಾಕಿಸ್ತಾನಕ್ಕೆ ನಡುಕ ಶುರುವಾಗಿದೆ. ಹೀಗಾಗಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಭಾರತದ ವಿರುದ್ಧ ಕಟು ಹೇಳಿಕೆ ನೀಡಿದ್ದಾರೆ.
ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್, ಭಾರತ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ಳುತ್ತೀವಿ ಎಂದ ಅವರು, ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರಿರುವವರೆಗೂ ಹೋರಾಡುತ್ತೇವೆ ಎಂದು ಹೇಳಿದ್ದಾರೆ.
ದಾಳಿ ಒಪ್ಪಿಕೊಳ್ಳದ ಪಾಕ್: ಅಲ್ಲದೇ ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿ ಕುರಿತು ಮತ್ತೆ ಪ್ರಸ್ತಾಪಿಸಿದ ಷರೀಫ್, ಪಹಲ್ಗಾಮ್ ದಾಳಿ ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ, ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದೆವು. ಆದ್ರೆ ಭಾರತ ನಮ್ಮ ಸ್ಪಷ್ಟನೆಯನ್ನು ಸ್ವೀಕರಿಸದೇ ದಾಳಿ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದಕ್ಕೂ ಮುನ್ನ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಮಾತನಾಡುತ್ತಾ, ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ. ಭಾರತದ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ. ಪಾಕಿಸ್ತಾನವು 5 ರಫೇಲ್ ಜೆಟ್‌ಗಳು ಮತ್ತು 2 ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಹಸಿಹಸಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದರು.
ಏನಿದು ʻಆಪರೇಷನ್ ಸಿಂಧೂರʼ?: ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪೆಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನು ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ʻಆಪರೇಷನ್ ಸಿಂಧೂರʼ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಉಗ್ರರ ಮಟ್ಟಹಾಕಿದೆ.
ಇನ್ನು ಈ ದಾಳಿಯಲ್ಲಿ ಪಾಕ್ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ. ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್ ಡೇಂಜರಸ್ ತಾಣಗಳು ಎಂದೇ ಗುರುತಿಸಿಕೊಂಡಿದ್ದವು. ಇವು ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.
Related

You Might Also Like
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...
NWKRTC: 45 ವರ್ಷದ ಮಹಿಳೆಗೆ ಅನುಕಂಪದ ಆಧಾರದಡಿ ಹುದ್ದೆಕೊಡಿ- ಹೈಕೋರ್ಟ್ ಆದೇಶ
ಬೆಂಗಳೂರು: ವಯೋಮಿತಿ ಮೀರಿದ ಮಹಿಳೆಗೆ ವಿಶೇಷ ಪ್ರಕರಣವೆಂದು ಅನುಕಂಪದ ಹುದ್ದೆ ನೀಡಬೇಕು ಎಂದು ಹೈಕೋರ್ಟ್ ಮಹತ್ವ ಆದೇಶ ಹೊರಡಿಸಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರನ...
BBMP: ಗಣೇಶ ಮೂರ್ತಿ ವಿಸರ್ಜನೆಗೆ 41ಕೆರೆಗಳು, 489 ಸಂಚಾರಿ ವಾಹನಗಳ ವ್ಯವಸ್ಥೆ
ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆ ಅಂಗಳ, ತಾತ್ಕಾಲಿಕ ಕಲ್ಯಾಣಿ, ಸಂಚಾರಿ ವಾಹನ (ಮೊಬೈಲ್ ಟ್ಯಾಂಕ್)/ ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. 41ಕೆರೆ,...
ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಲಾವಿದರು-ಕಲಾತಂಡದವರಿಂದ ಅರ್ಜಿ ಆಹ್ವಾನ
ಶಿವಮೊಗ್ಗ: ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಅಥವಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದು ಮಹಾನಗರ ಪಾಲಿಕೆವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಯಸುವ...
NWKRTC: ಆ.22ರಿಂದ 26ರವರೆಗೆ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಗಳ ಸೌಲಭ್ಯ
ಬೆಂಗಳೂರು: ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುವುದರಿಂದ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಗಳಿಗೆ ಕಾರ್ಯಾಚರಣೆ ನಡೆಸಲಿವೆ....
BMTC: ಸ್ಕೂಟರ್ ಸ್ಕಿಡ್ಆಗಿ ಬಿದ್ದ ಬಾಲಕಿ ಬಸ್ ಹಿಂದಿನ ಚಕ್ರಕ್ಕೆ ಸಿಲುಕಿ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ 10 ವರ್ಷದ ಬಾಲಕಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್...
ಆದಿ ಜಾಂಬವ ಅಭಿವೃದ್ಧಿ ನಿಗಮದಲ್ಲಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಬೆಂಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಆದಿ ಜಾಂಬವ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ...
ಉತ್ತರಾಖಂಡ್ನ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ-ಸದಸ್ಯರ ನಿಯೋಗ ಗ್ರಾಮಾಂತರ ಜಿಲ್ಲೆಗೆ ಭೇಟಿ
ಬೆಂಂಗಳೂರು ಗ್ರಾಮಾಂತರ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯರಾದ ಜಂಗ್ಪಂಗಿ, ಎಂ.ಸಿ. ಜೋಷಿ ಅವರ ನಿಯೋಗವು ಅಧ್ಯಯನಕ್ಕಾಗಿ ಇಂದು ಜಿಲ್ಲೆಗೆ ಭೇಟಿ...