CRIMENEWSದೇಶ-ವಿದೇಶ

ಪ್ರತಿ ರಕ್ತದ ಹನಿಗೂ ಭಾರತ ಬೆಲೆ ತೆರಲೇಬೇಕು: ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

ವಿಜಯಪಥ ಸಮಗ್ರ ಸುದ್ದಿ

ಇಸ್ಲಾಮಾಬಾದ್‌: ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಿಂದ ಪಾಕಿಸ್ತಾನಕ್ಕೆ ನಡುಕ ಶುರುವಾಗಿದೆ. ಹೀಗಾಗಿ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಭಾರತದ ವಿರುದ್ಧ ಕಟು ಹೇಳಿಕೆ ನೀಡಿದ್ದಾರೆ.

ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್‌, ಭಾರತ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ಳುತ್ತೀವಿ ಎಂದ ಅವರು, ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರಿರುವವರೆಗೂ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

ದಾಳಿ ಒಪ್ಪಿಕೊಳ್ಳದ ಪಾಕ್‌: ಅಲ್ಲದೇ ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ದಾಳಿ ಕುರಿತು ಮತ್ತೆ ಪ್ರಸ್ತಾಪಿಸಿದ ಷರೀಫ್‌, ಪಹಲ್ಗಾಮ್‌ ದಾಳಿ ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ, ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದೆವು. ಆದ್ರೆ ಭಾರತ ನಮ್ಮ ಸ್ಪಷ್ಟನೆಯನ್ನು‌ ಸ್ವೀಕರಿಸದೇ ದಾಳಿ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೂ ಮುನ್ನ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಮಾತನಾಡುತ್ತಾ, ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ. ಭಾರತದ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ. ಪಾಕಿಸ್ತಾನವು 5 ರಫೇಲ್ ಜೆಟ್‌ಗಳು ಮತ್ತು 2 ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಹಸಿಹಸಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದರು.

ಏನಿದು ʻಆಪರೇಷನ್‌ ಸಿಂಧೂರʼ?: ಕಳೆದ ಏಪ್ರಿಲ್‌ 22ರಂದು ಕಾಶ್ಮೀರದ ಪೆಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನು ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ʻಆಪರೇಷನ್‌ ಸಿಂಧೂರʼ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಉಗ್ರರ ಮಟ್ಟಹಾಕಿದೆ.

ಇನ್ನು ಈ ದಾಳಿಯಲ್ಲಿ ಪಾಕ್‌ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ. ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್‌ ಡೇಂಜರಸ್‌ ತಾಣಗಳು ಎಂದೇ ಗುರುತಿಸಿಕೊಂಡಿದ್ದವು. ಇವು ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ