- ಭಾರತ ರತ್ನ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಪೌರ ಕಾರ್ಮಿಕರ ದಿನಾಚರಣೆ
ಬೆಂಗಳೂರು: ‘ಲಿಖಿತ ರೂಪದಲ್ಲಿರುವ ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ’ ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಬಿಎಂಪಿ ವತಿಯಿಂದ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಇಂದು ಹಮ್ಮಿಕೊಂಡಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಹಾಗೂ ಪೌರಕಾರ್ಮಿಕರ ದಿನಾಚರಣೆ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಾ. ಬಿ.ಆರ್ ಅಂಬೇಡ್ಕರ್ ರವರು ಇಡೀ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ಕಲ್ಪಿಸಿಕೊಟ್ಟವರು. ಅದು ಇಡೀ ಪ್ರಪಂಚದಲ್ಲಿಯೇ ಉತ್ತಮವಾದ, ವಿವರಾತ್ಮಕವಾದ ಸಂವಿಧಾನವಾಗಿದೆ. ಇದು ಕೇವಲ ಭಾರತಕ್ಕೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ವಿಶ್ವದ ಅನೇಕ ದೇಶಗಳಿಗೆ ಮುನ್ನುಡಿಯಾಗಲಿದೆ ಎಂದು ಹೇಳಿದರು.
ಪೌರಕರ್ಮಿಕರಿಗಾಗಿ ಒಂಟಿ ಮನೆ ಯೋಜನೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿವಿಧ ಸೌಲಭ್ಯ, ಧನಸಹಾಯ, ಬೋನಸ್ ನೀಡಲಾಗುತ್ತಿದೆ. ಹಲವಾರು ಹಿತರಕ್ಷಣಾ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನವನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ. ಕಳೆದ ಬಾರಿ ಆಯವ್ಯಯಕ್ಕಿಂತ ಹೆಚ್ಚಿನ ಅನುದಾನವನ್ನು ಈ ಬಾರಿ ಮಿಸಲಿಡಲಾಗಿದೆ ಎಂದು ಹೇಳಿದರು.
12,692 ಪೌರಕಾರ್ಮಿಕರ ಕಾಯಂ: ಪೌರಕಾರ್ಮಿಕರ ಒಳಿತಿಗಾಗಿ ಪಾಲಿಕೆ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ 12,692 ನೇರ ವೇತನ ಪೌರಕಾರ್ಮಿಕರನ್ನು ಕಾಯಂ ಮಾಡಿಕೊಳ್ಳುತ್ತಿದ್ದೇವೆ. ಪೌರಕಾರ್ಮಿಕರ ಕಾಯಂಮಾತಿಗೆ ಪ್ರಮುಖ ಕಾರಣೀಕರ್ತರು ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ವಲಯ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಮುತುವರ್ಜಿ ವಹಿಸಿದ್ದು, ಅವರೆಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ.
ಮೇ 1 ರಂದು ನೇಮಕಾತಿ ಆದೇಶ ವಿತರಣೆ: ಪೌರಕಾರ್ಮಿಕರನ್ನು ಖಾಯಂ ಮಾಡುವ ವೇಳೆ ಸಾಕಷ್ಟು ದೂರುಗಳು, ಮೋಸ, ದುರುಪಯೋಗಗಳಿಗೆ ಯಾವ ಅಧಿಕಾರಿಗಳೂ ಆಸ್ಪದ ನೀಡದೆ, ಖಾಯಮಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಖಾಯಂ ಆದ ನಂತರ ಪೌರಕಾರ್ಮಿಕರು ಮುಂದಿನ ದಿನಗಳಲ್ಲಿ ನೆಮ್ಮದಿ ಜೀವನ ಸಾಗಿಸಲು ಅನುಕೂಲವಾಗಲಿದೆ. 1ನೇ ಮೇ 2025 ರಂದು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಖಾಯಂ ಆದವರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ರವರ ಕುರಿತಂತಹ ಪುಸ್ತಕಗಳನ್ನು ನಾವೆಲ್ಲರೂ ಓದಿ ಅರಿತುಕೊಳ್ಳಬೇಕಿದೆ. ಅವರ ವ್ಯಕ್ತಿತ್ವವನ್ನು ನಾವು ಎಲ್ಲರಿಗೂ ಪರಿಚಯಿಸಬೇಕು. ಅವರ ಎಲ್ಲಾ ವಿಚಾರಧಾರೆಗಳನ್ನು ಇತರರಿಗೂ ತಿಳಿಯುವ ಹಾಗೆ ಮಾಡಬೇಕೆಂದು ಅಭಿಪ್ರಾಯಪಟ್ಟರು.
ಪೌರಕಾರ್ಮಿಕರ ಮಕ್ಕಳು ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಗಳಿಸಿದವರಿಗೆ ಇಂದು ಸನ್ಮಾನ ಮಾಡಿ, ಅವರೆಲ್ಲರಿಗೂ “ಡಾ. ಬಿ.ಆರ್ ಅಂಬೇಡ್ಕರ್ ರವರ ವಿಚಾರಗಳು” ಎಂಬ ಪುಸ್ತಕವನ್ನು ನೀಡಲಾಗಿದೆ. ಅದನ್ನು ಸಂಪೂರ್ಣವಾಗಿ ಓದಿ ಬೇರೆಯವರಿಗೂ ಅದನ್ನು ಓದಿ ತಿಳಿದುಕೊಳ್ಳಲು ಪ್ರೇರಣೆ ನೀಡಬೇಕೆಂದು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ: ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ-2025 ಕಾರ್ಯಕ್ರಮಕ್ಕೂ ಮುಂಚಿತವಾಗಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಹಾಗೂ ಪೌರಕಾರ್ಮಿಕರ ಪಿತಾಮಹ ಐ.ಪಿ.ಡಿ ಸಾಲಪ್ಪ ರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.
ಪೌರಕಾರ್ಮಿಕರ ಮಕ್ಕಳಿಗೆ ಸನ್ಮಾನ: ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಪಡೆದ ಪೌರಕಾರ್ಮಿಕರ 46 ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಅತ್ಯುತ್ತಮ ಪೌರಕಾರ್ಮಿಕರಿಗೆ ಸನ್ಮಾನ: ಪಾಲಿಕೆಯ ಎಂಟು ವಲಯಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 17 ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಪೌರಕಾರ್ಮಿಕರಿಗೆ ಬೋನಸ್: ಡಾ: ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಖಾಯಂ ಪೌರಕಾರ್ಮಿಕರಿಗೆ 22,000 ರೂ. ಹಾಗೂ ನೇರ ವೇತನ ಪೌರಕಾರ್ಮಿಕರಿಗೆ 8,000 ರೂ. ಗಳ ಬೋನಸ್ ನೀಡಲಾಗುವುದು.
ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಕರೀಗೌಡ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Related


You Might Also Like
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...