NEWSನಮ್ಮಜಿಲ್ಲೆ

ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ

ಮುಂದಿನ ಮೂರು ತಿಂಗಳಲ್ಲಿ 21 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ದೇವನಹಳ್ಳಿ: ಮಹಿಳೆಯರ ಪರವಾಗಿ ಅವರ ಅಭಿವೃದ್ಧಿಗಾಗಿ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಮಹಿಳಾ ಸಬಲೀರಣಕ್ಕೆ ಕಾರಣೀಭೂತರಾಗಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.

ಅಂಗನವಾಡಿ ಶಿಕ್ಷಕಿಯರ ಮತ್ತು ಸಹಾಯಕಿಯರ ದಿನಾಚರಣೆ ಪ್ರಯುಕ್ತ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶಿಶು ಅಭಿವೃದ್ಧಿ ಯೋಜನೆಯ 50ನೇ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದೆ ಮಹಿಳೆಯರು ಪೌಷ್ಠಿಕಾಂಶದ ಕೊರತೆಯಿಂದ ನರಳುತ್ತಿದ್ದ ಸಂದರ್ಭದಲ್ಲಿ ಮಹಿಳೆಯರ ಪರವಾಗಿ ಅವರ ಅಭಿವೃದ್ಧಿಗಾಗಿ ಇಂದಿರಾ ಗಾಂಧಿಯವರು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಹೀಗಾಗಿ ಈ ವೇಳೆ ಅವರನ್ನು ನಾವು ಸ್ಮರಿಸಬೇಕು ಎಂದರು.

ಅಂಗನವಾಡಿ ಶಾಲೆಯಲ್ಲಿ ಮಕ್ಕಳ ಅಭಿವೃದ್ಧಿಯೊಂದಿಗೆ ಅವರ ಬೆಳವಣಿಗೆ ಹಾಗೂ ಶಿಕ್ಷಣವನ್ನು ಗುಣಮಟ್ಟದ ರೀತಿಯಲ್ಲಿ ಕೊಡುವುದು ಪುಣ್ಯದ ಕೆಲಸ ತಮ್ಮ ಮಕ್ಕಳಂತೆ ಎಲ್ಲರ ಅಭಿವೃದ್ಧಿಗೆ ಶ್ರಮಿಸಿ ಎಂದು ಸಲಹೆ ನೀಡಿದರು.

ಸಿ ಎಸ್ ಆರ್ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಪಂಚಾಯಿತಿ ಮಟ್ಟದಲ್ಲಿ ಒಂದೊಂದು ಶಾಲೆಯನ್ನು ಕಟ್ಟುವ ಮೂಲಕ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಈಗಾಗಲೇ 101 ಶಾಲೆಗಳ ನಿರ್ಮಾಣವಾಗಿತ್ತಿವೆ. ಅದೇ ರೀತಿ ದೇವನಹಳ್ಳಿಯಲ್ಲಿ 21 ಅಂಗನವಾಡಿ ಕಟ್ಟಡಗಳನ್ನು ಮುಂದಿನ ಮೂರು ತಿಂಗಳಲ್ಲಿ ಕಟ್ಟುವುದಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಬಯ್ಯಪ್ಪಾ ಅಧ್ಯಕ್ಷ ಶಾಂತಕುಮಾರ್, ತಾಲೂಕು ಅಂಗನವಾಡಿ ಶಿಕ್ಷಕಿಯರ ಸಂಘದ ಅಧ್ಯಕ್ಷರಾದ ಪುಷ್ಪಾವತಮ್ಮ ಮತ್ತಿತರರು ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ