NEWSಕ್ರೀಡೆನಮ್ಮಜಿಲ್ಲೆ

ಐಪಿಎಲ್  ಕ್ರಿಕೆಟ್: ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಎಂಟಿಸಿ ಬಸ್ ವ್ಯವಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈಗಾಗಲೇ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಾವಳಿಗೆ ತೆರಳಲು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಿಎಂಟಿಸಿ ವಿವಿಧ ಮಾರ್ಗಗಳಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದು, ಇದರಿಂದ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ   ಏ.15,  ಮೇ 4,  ಮೇ, 12 ನೇ ಮೇ 18ರಂದು  ಐಪಿಎಲ್  ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿಯನ್ನು ವೀಕ್ಷಿಸಲು ಸಹಸ್ರಾರು ಮಂದಿ ಬೆಂಗಳೂರಿಗೆ ಆಗಮಿಸಲಿದ್ದು, ಅವರಿಗೆ ಸ್ಟೇಡಿಯಂಗೆ ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬಿಎಂಟಿಸಿ ಕ್ರಮ ಕೈಗೊಂಡಿದೆ. ಅದರಂತೆ ವಿವಿಧ ಮಾರ್ಗಗಳಲ್ಲಿ ಬಸ್ ಗಳ ವ್ಯವಸ್ಥೆ ಮಾಡಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಇನ್ನು ಕ್ರಿಕೆಟ್ ಪಂದ್ಯಾವಳಿ ನಡೆಯುವ ದಿನಗಳಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮಾರ್ಗಸಂಖ್ಯೆ ಎಸ್.ಬಿ.ಎಸ್-1 ರಿಂದ  ಕಾಡಗೋಡಿ ಬಸ್ ನಿಲ್ದಾಣ (ಹೆಚ್.ಎ.ಎಲ್ ರಸ್ತೆ), ಎಸ್.ಬಿ.ಎಸ್-13 ಮಾರ್ಗದಿಂದ ಕಾಡಗೋಡಿ ಬಸ್ ನಿಲ್ದಾಣ (ಹೂಡಿ ರಸ್ತೆ), ಜಿ-2 ಮಾರ್ಗದಿಂದ ಸರ್ಜಾಪುರ, ಜಿ-3 ಮಾರ್ಗದಿಂದ ಎಲೆಕ್ಟ್ರಾನಿಕ ಸಿಟಿ (ಹೊಸೂರು ರಸ್ತೆ). ಜಿ-4  ಮಾರ್ಗದಿಂದ ಬನ್ನೇರುಘಟ್ಟ ಮೃಗಾಲಯ, ಜಿ-6 ಮಾರ್ಗದಿಂದ ಕೆಂಗೇರಿ ಕೆ.ಹೆಚ್.ಬಿ ಕ್ವಾಟ್ರಸ್ (ಎಂ.ಸಿ.ಟಿ.ಸಿ ನಾಯಂಡಹಳ್ಳಿ).

ಇನ್ನು ಜಿ-7 ಮಾರ್ಗದಿಂದ ಜನಪ್ರಿಯ ಟೌನ್‍ಷಿಪ್ (ಮಾಗಡಿ ರಸ್ತೆ),  ಜಿ-8 ಮಾರ್ಗದಿಂದ   ನೆಲಮಂಗಲ, ಜಿ-9 ಮಾರ್ಗದಿಂದ  ಯಲಯಂಕ 5ನೇ ಹಂತ, ಜಿ-10 ಮಾರ್ಗದಿಂದ ಆರ್.ಕೆ. ಹೆಗಡೆ ನಗರ (ನಾಗವಾರ, ಟ್ಯಾನರಿ ರಸ್ತೆ), ಜಿ-11 ಮಾರ್ಗದಿಂದ ಬಾಗಲೂರು (ಹೆಣ್ಣೂರು ರಸ್ತೆ), ಕೆ.ಬಿ.ಎಸ್ 12 ಹೆಚ್.ಕೆ. ಮಾರ್ಗದಿಂದ ಹೊಸಕೋಟೆಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಕ್ರಿಕೆಟ್ ಪ್ರೇಮಿಗಳು ಈ ಮಾರ್ಗಗಳಲ್ಲಿ ಸಂಚರಿಸುವ ಬಸ್ ಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಬಹುದಾಗಿದೆ. ಮುಂದಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ಕುತೂಹಲ ಘಟ್ಟಕ್ಕೆ ಹೋಗಲಿದ್ದು, ಜೀವನದಲ್ಲಿ ಒಮ್ಮೆಯಾದರೂ ಸ್ಟೇಡಿಯಂನಲ್ಲಿ ಕುಳಿತು ಪಂದ್ಯಾವಳಿಯನ್ನು ನೋಡಬೇಕೆಂದು ಬಯಸುವವರು ಟಿಕೆಟ್ ಕಾದಿರಿಸಲು ಮುಗಿಬಿದ್ದಿದ್ದಾರೆ. ಅದರಂತೆ ಕ್ರಿಕೆಟ್ ಪ್ರೇಮಿಗಳು ಸ್ಟೇಡಿಯಂಗೆ ತೆರಳಲು ಯಾವುದೇ ರೀತಿಯ ತೊಂದರೆಯಾಗಬಾರದೆಂದು ಬಿಎಂಟಿಸಿ ಬಸ್ ವ್ಯವಸ್ಥೆಗಳನ್ನು ಕಲ್ಪಿಸಿದೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು