NEWSದೇಶ-ವಿದೇಶಸಂಸ್ಕೃತಿ

ಬಿಜೆಪಿಗೆ ಸ್ವಾಮಿ ವಿವೇಕಾನಂದರು ಬಳಸಿ ಬಿಸಾಡುವ ವಸ್ತುವಾಗಿದ್ದಾರೆಯೇ?: ಎಎಪಿ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ಹಾಗೂ ಸಂಘ ಪರಿವಾರ ಭಾರತದಲ್ಲಿ ಬಲವಾಗಿ ಬೇರೂರಲು ಸ್ವಾಮಿ ವಿವೇಕಾನಂದರನ್ನು ದುರ್ಬಳಕೆ ಮಾಡಿಕೊಂಡಿರುವುದು ಗುಟ್ಟಾಗಿ ಉಳಿದಿಲ್ಲ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕ್ರಮದ ವೇದಿಕೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗ್ರವಾಲ್ ಅವರು ಅಸಹನೆಯಿಂದ ಸ್ವಾಮಿ ವಿವೇಕಾನಂದರ ಫೋಟೊ ಯಾಕೆ ಇಟ್ಟಿದ್ದೀರಿ ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಇಂದು ಜಗದೀಶ್ ಸದಂ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಕಳೆದ 10 ವರ್ಷಗಳಿಂದ ಅಧಿಕಾರ ಸಾಧಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಈಗ ಸ್ವಾಮಿ ವಿವೇಕಾನಂದರ ಅಗತ್ಯವೂ ಇಲ್ಲ. ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆಯ ಅಂಗವಾಗಿ ಇರಿಸಲಾಗಿದ್ದ ಫೋಟೊವನ್ನು ಯಾಕೆ ಇಟ್ಟಿದ್ದೀರಿ ಎಂದು ಪ್ರಶ್ನಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗ್ರವಾಲ್, ಬಿಜೆಪಿ ಪಾಲಿಗೆ ವಿವೇಕಾನಂದರು ಬಳಸಿ ಬಿಸಾಡಲ್ಪಟ್ಟವರು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಕಿಡಿಕಾರಿದರು.

ಭಾರತದ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಪಸರಿಸಿದ ವೀರ ಸನ್ಯಾಸಿ, ನೈಜ ಹಿಂದೂ, ಅಪ್ರತಿಮ ವಾಗ್ಮಿ, ಅನುಪಮ ಮಾನವತಾವಾದಿ, ಯುವಪ್ರೇರಕ, ಸಿಡಿಲ ಸಂತ ಸ್ವಾಮಿ ವಿವೇಕಾನಂದರು ಹಾಕಿಕೊಟ್ಟಿರುವ ಧರ್ಮ ಮಾರ್ಗದಲ್ಲಿ ಎಂದೂ ಹೆಜ್ಜೆ ಇರಿಸದ ಬಿಜೆಪಿ, RSSನವರು ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬಿಜೆಪಿ ಬೆಂಬಲಿಸುತ್ತಿರುವ ಹೆಚ್ಚಿನ ಯುವಕರು ಸ್ವಾಮಿ ವಿವೇಕಾನಂದರ ಕಾರಣಕ್ಕಾಗಿ ಬೆಂಬಲಿಸುತ್ತಿರುವವರಾಗಿದ್ದಾರೆ. ಆದರೆ, ವಿವೇಕಾನಂದರ ಹೆಸರಲ್ಲಿ ಅಷ್ಟೂ ಯುವಕರನ್ನು ವಂಚಿಸಿದ್ದಾರೆ. ಹಿಂಸೆ, ದ್ವೇಷ, ವೈರತ್ವವವನ್ನೇ ತುಂಬಿಕೊಂಡಿರುವ ಬಿಜೆಪಿ, ಆರೆಸ್ಸೆಸ್ ನವರು ಎಂದೂ ವಿವೇಕಾನಂದರ ಪಥದಲ್ಲಿ ಹೆಜ್ಜೆ ಇರಿಸಿಲ್ಲ ಎಂದು ಜಗದೀಶ್ ಸದಂ ವಾಗ್ದಾಳಿ ನಡೆಸಿದರು.

ದೇವರು, ಧರ್ಮವನ್ನು ದುರ್ಬಳಕೆ ಮಾಡಿಕೊಂಡ ರೀತಿಯಲ್ಲೇ ಸ್ವಾಮಿ ವಿವೇಕಾನಂದರನ್ನು ದುರ್ಬಳಕೆ ಮಾಡಿಕೊಂಡರು. ಈ ಲೋಕಸಭೆ ಚುನಾವಣೆಯಲ್ಲಿ ರಾಮ ಮಂದಿರದ ಹೆಸರಲ್ಲಿ ರಾಜಕಾರಣ ಮಾಡಲು ಯತ್ನಿಸಿ ಸ್ವತಃ ಅಯೋಧ್ಯೆಯಲ್ಲೇ ಸೋತರು. ಈ ಕಾರಣಕ್ಕಾಗಿ ಬಿಜೆಪಿಯವರು ಶ್ರೀರಾಮನನ್ನೇ ನಿಂದಿಸುತ್ತಿದ್ದಾರೆ.

ಜನತೆ ಇಂತಹ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮೊದಲು ಭಗತ್ ಸಿಂಗ್ ಹೆಸರನ್ನು ಎತ್ತುತ್ತಿದ್ದರು. ಕ್ರಮೇಣ ಭಗತ್ ಸಿಂಗ್ ಅವರ ಬದುಕಿನ ಹೋರಾಟಕ್ಕೂ ತಮ್ಮ ಹೇರಿಕೆಯ ಹಿಂದುತ್ವದ ಸಿದ್ಧಾಂತಕ್ಕೂ ಸರಿ ಹೊಂದದ ಕಾರಣ ಭಗತ್ ಸಿಂಗ್ ಅವರನ್ನು ಕೈಬಿಟ್ಟರು.

ಇನ್ನು ಸ್ವಾಮಿ ವಿವೇಕಾನಂದರ ಬದುಕಿಗೂ ಬಿಜೆಪಿಗರ ಹಿಂದುತ್ವದ ಸಿದ್ಧಾಂತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹಾಗಾಗಿ ಅವರ ಹಾದಿಯನ್ನು ಎಂದೂ ತುಳಿಯದ ಬಿಜೆಪಿಗರು ಈಗೀಗ ಸ್ವಾಮಿ ವಿವೇಕಾನಂದರ ಹೆಸರನ್ನೇ ಹೇಳುತ್ತಿಲ್ಲ. ಬಿಜೆಪಿಗೆ ವಿವೇಕಾನಂದರ ಬಗ್ಗೆ ನಿಜಕ್ಕೂ ಗೌರವವಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ