CrimeNEWSದೇಶ-ವಿದೇಶನಮ್ಮರಾಜ್ಯ

ಬೆಳ್ಳಂಬೆಳಗ್ಗೆ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ದಾಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ನಗರದ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಮಹತ್ವದ ದಾಖಲೆಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಮಣಿಪಾಲ್ ಗ್ರೂಪ್ ಮೇಲೆ ಐಟಿ ದಾಳಿ ನಡೆದಿರುವ ಹಿನ್ನೆಲೆ, ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರಿನಿಂದ ಕಾರು ಬಾಡಿಗೆ ಪಡೆದು ಬಂದಿದ್ದಾರೆ.

ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ದಾಳಿ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆಗೆ ಐಟಿ(Income Tax) ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಓಲ್ಡ್ ಏರ್‌ ಪೋರ್ಟ್ ರೋಡ್, ಕನ್ನಿಂಗ್ ಹ್ಯಾಮ್ ರೋಡ್, ಯಶವಂತಪುರ, ಏರ್‌ ಪೋರ್ಟ್ ರೋಡ್ ಸೇರಿದಂತೆ 22 ಕಡೆ ದಾಳಿ ನಡೆದಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ