NEWSಕೃಷಿನಮ್ಮರಾಜ್ಯ

ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌

ಸಾಲುಮರದ ತಿಮ್ಮಕ್ಕನ 113ನೇ ವರ್ಷದ ಜನ್ಮದಿನದ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಾವುದೇ ಸ್ವಾರ್ಥವಿಲ್ಲದೇ ಮರಗಳನ್ನೆ ಮಕ್ಕಳೆಂದು ಭಾವಿಸಿ ಮನುಕುಲವನ್ನು ರಕ್ಷಿಸುವ ಬಹುದೊಡ್ಡ ಕೆಲಸವನ್ನು ಸಾಲುಮರದ ತಿಮ್ಮಕ್ಕನವರು ಮಾಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ವಸಂತನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ವೃಕ್ಷಮಾತೆ, ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ರವರ 113ನೇ ವರ್ಷದ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ‘ನ್ಯಾಷನಲ್ ಗ್ರೀನರಿ ಅವಾರ್ಡ್’ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಬಳಿಕ ದೇಶದಾದ್ಯಂತ ನಡೆಯುವ ‘ಮಹಾವೃಕ್ಷ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಮಳೆ‌ ಬರಬೇಕಾದ ಸಂದರ್ಭಕ್ಕೆ ಬರುತ್ತಿಲ್ಲ‌. ಒಂದು ಭಾಗದಲ್ಲಿ ಮಳೆಯಾದರೆ, ಮತ್ತೊಂದು ಭಾಗದಲ್ಲಿ ಮಳೆಯಾಗುತ್ತಿಲ್ಲ. ಭೂಮಿಯ ಹಸಿರು ಪದರು ಕಡಿಮೆಯಾಗಿರುವುದೇ ಕಾರಣ. ಭಾರತದಲ್ಲಿ 21.7 ಹಸಿರು ಪದರ ಇದೆ. ಕರ್ನಾಟಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಇದರಿಂದ ಭೂಮಿಯ ಉಷ್ಣಾಂಶ ಹೆಚ್ಚಾಗುತ್ತಿದೆ. ಇದರ ಪರಿಣಾಮ ಕೋಟ್ಯಂತರ ಕೀಟಗಳು ನಾಶವಾಗುತ್ತಿವೆ. ಕೀಟಗಳು ನಾಶವಾದರೆ ಮನುಕುಲಕ್ಕೆ ಅಪಾಯ ಎದುರಾಗಲಿದೆ ಎಂದರು.

ಬಹುತೇಕ ದೇಶಗಳಲ್ಲಿ ಅಗ್ನಿ ಅವಘಡದಿಂದ ಕಾಡು ನಾಶವಾಗಿದೆ. ಅರಣ್ಯ ಭೂಮಿ ಕ್ಷೀಣಿಸುತ್ತಿದೆ. ಇದು ಮನುಕುಲಕ್ಕೆ ಅಪಾಯಕಾರಿ. ತಾಯಿ ಸಾಲುಮರದ ತಿಮ್ಮಕ್ಕನಿಗೆ ಇದ್ಯಾವುದರ ಬಗ್ಗೆಯೂ ಗೊತ್ತಿಲ್ಲ. ಆದರೂ ಮರಗಳನ್ನು ಮಕ್ಕಳೆಂದು ಭಾವಿಸಿ ಬೆಳೆಸುವ ಮುಖೇನ ಮನುಕುಲವನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ವಿಶ್ವಕ್ಕೆ ಸಂದೇಶ ಕೊಟ್ಟಿದ್ದಾರೆ. ಅವರ ಸಾಧನೆಯನ್ನು ಎಷ್ಟು ಶ್ಲಾಘಿಸಿದರು ಸಾಲುವುದಿಲ್ಲ ಎಂದು ಹೇಳಿದರು.

ಆಕೆಯ ಹುಟ್ಟುಹಬ್ಬ ನಿಮಿತ್ತ ಮಾತ್ರ. ಈ ಕಾರ್ಯಕ್ರಮದಿಂದ ಪರಿಸರ ಸಂರಕ್ಷಣೆಯ ಸಂದೇಶ ಎಲ್ಲೆಡೆ ಹೋಗಬೇಕು. ಇಂತಹ ಕಾರ್ಯಕ್ರಮಗಳನ್ನು ಸರ್ಕಾರ ಎಂದಿಗೂ ಸಹ ಇಂತಹ ಪ್ರೋತ್ಸಾಹಿಸಿದೆ. ತಿಮ್ಮಕ್ಕನವರ ಸೇವೆ ಮಾಡುವ ಪುಣ್ಯ ನಮಗೆ ಸಿಕ್ಕಿರುವುದೇ ಪುಣ್ಯ. ಅವರ ಕಾಲಮಾನದಲ್ಲಿ ನಾವಿರುವುದೇ ಸಂತೋಷದಾಯಕ ವಿಷಯ. ಹಾಗಾಗಿ ನಾನು ಸಹ ಸಾಲುಮರದ ತಿಮ್ಮಕ್ಕನವರ ಮಗ ಉಮೇಶ ಅವರ ಜೊತೆಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗದ ಭೋವಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಖ್ಯಾತ ವೈದ್ಯ ಡಾ. ರಮಣರಾವ್, ಅಪೋಲೋ ಆಸ್ಪತ್ರೆ ಮುಖ್ಯಸ್ಥ ಡಾ. ಗೋವಿಂದಯ್ಯ ಯತೀಶ್, ಡಾ. ರಜನಿ ಸುರೇಂದರ್ ಭಟ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!