ಗಂಗಾವತಿ: ಪತಿ ಶಾಸಕ ಸ್ಥಾನದಿಂದ ಅನರ್ಹವಾದ ಬೆನ್ನಲ್ಲೇ ಜನಾರ್ದನ ರೆಡ್ಡಿ ಪತ್ನಿಯಿಂದ ಕಾರ್ಯಕರ್ತರ ಸಭೆ

ಗಂಗಾವತಿ: ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ನ ಸಿಬಿಐ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದರಿಂದ ಶಾಸಕ ಸ್ಥಾನದಿಂದ ಅನರ್ಹವಾಗಿರುವ ಬೆನ್ನಲ್ಲೆ ಗಂಗಾವತಿ ವಿಧಾನಸಭೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ.
ಶಾಸಕ ಸ್ಥಾನದಿಂದ ಅನರ್ಹವಾದ ಸುದ್ದಿ ಪ್ರಕಟವಾಗುತ್ತಿದ್ದಂತೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ ಭಾರೀ ವಿದ್ಯಮಾನಗಳು ನಡೆದಿವೆ. ಇದರ ನಡುವೆ ಗಾಲಿ ಜನಾರ್ದನ ರೆಡ್ಡಿ ಅಭಿಮಾನಿಗಳ ಬಳಗದಿಂದ ಇಂದು ಶ್ರೀಚೆನ್ನಬಸವ ತಾತ ಕಲಾಮಂದಿರದಲ್ಲಿ ವಿಶೇಷ ಸಭೆ ನಡೆಯಿತು.
ಈ ಸಭೆಯನ್ನು ಅವರ ಪತ್ನಿ ಅರುಣಾ ನಡೆಸಿದರು. ರೆಡ್ಡಿಯವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದರೂ ಅವರಿಗೆ ಜನಬೆಂಬಲ ಈಗಲೂ ಇದೆ ಅನ್ನೋದಕ್ಕೆ ಇಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಬೆಂಬಲಿಗರೇ ಸಾಕ್ಷಿ. ಬಹಳಷ್ಟ್ಟು ಜನ ಮಾತಾಡಿ ಅರುಣಾ ಅವರಿಗೆ ಬೆಂಬಲ ಸೂಚಿಸಿದರು ತಮ್ಮ ಯಾವ ಕಾರಣಕ್ಕೂ ರೆಡ್ಡಿಯವರಿಂದ ವಿಮುಖರಾಗುವುದಿಲ್ಲ ಎಂದು ಹೇಳಿದರು.
ಇತ್ತ ಜಾಮೀನಿಗಾಗಿ ವಿಶೇಷ ಪೂಜೆ: ಗಣಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅನರ್ಹ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಆಪ್ತ ಅಲಿಖಾನ್ ಅವರಿಗೆ ಶೀಘ್ರ ಜಾಮೀನು ಸಿಗಲೆಂದು ಪ್ರಾರ್ಥಿಸಿ ಸಭೆಗೂ ಮುನ್ನಾ ಬೆಳಗ್ಗೆ ಕರ್ನೂಲನ ತಾತಾ ದರ್ಗಾ ಮತ್ತು ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಅರುಣಾ ಸ್ಪರ್ಧಿಸುವರೇ?: ಒಂದು ವೇಳೆ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ ಅನರ್ಹ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಸ್ಪರ್ಧಿಸುವ ಚಿಂತನೆ ನಡೆದಿದೆ. 2023ರಲ್ಲಿ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಕೆಆರ್‌ಪಿಪಿ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿರುವ ಅವರು ಇಲ್ಲಿ ಸ್ಪರ್ಧಿಸುವ ಚಿಂತನೆಯಲ್ಲಿದ್ದಾರೆ.
ಈಗಾಗಲೇ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಿದೆ. ಬಿಜೆಪಿಯಿಂದ ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಹೆಸರು ಮುಂಚೂಣಿಯಲ್ಲಿದೆ. ಈಗ ಲಕ್ಷ್ಮೀ ಅರುಣಾ ಅಖಾಡಕ್ಕೆ ಬಂದಿದ್ದರಿಂದ ಪಕ್ಷ ಯಾರಿಗೆ ಮಣೆ ಹಾಕುತ್ತದೆ ಎಂಬುದು ಕಾದುನೋಡಬೇಕಿದೆ.
ಶಾಸಕರಾಗಿ 2 ವರ್ಷ ಪೂರ್ಣಗೊಳ್ಳುತ್ತಿದ್ದರೂ ಸಹ ಗಂಗಾವತಿ ಕ್ಷೇತ್ರದ ಅಭಿವೃದ್ಧಿ ಇನ್ನೂ ಆಗಬೇಕಾಗಿದೆ. ಪತಿಯ ಕನಸು ನನಸು ಮಾಡಬೇಕೆಂಬ ಛಲ ತೊಟ್ಟಿರುವ ಅರುಣಾ, ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಹೀಗಾಗಿಯೇ ಇಂದು ನಡೆದ ಸಭೆಯಲ್ಲಿ ನೂರಾರು ಅಭಿಮಾನಿಗಳ ಭಾಗವಹಿಸಿ ಬೆಂಬಲ ಸೂಚಿಸುವ ಸುಳಿವು ನೀಡಿದರು ಎನ್ನಲಾಗುತ್ತಿದೆ.
ಕಾಂಗ್ರೆಸ್ಸಿನಲ್ಲೂ ಪೈಪೋಟಿ: ಕಾಂಗ್ರೆಸ್ ಪಕ್ಷದಿಂದ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ಮಾಜಿ ಸಂಸದ ಕರಡಿ ಸಂಗಣ್ಣ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ.
ಚುನಾವಣೆ ಘೋಷಣೆ ಆಗುವುದಕ್ಕೂ ಮೊದಲೇ ಇದೀಗ ಕ್ಷೇತ್ರದಲ್ಲಿ ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸುತ್ತಿರುವ ಆಕಾಂಕ್ಷಿಗಳು, ಚುನಾವಣೆ ಘೋಷಣೆ ಆದ ತಕ್ಷಣ ತಮ್ಮ ಬೆಂಬಲಿಗರ ಮೂಲಕ ವರಿಷ್ಠರಿಗೆ ಟಿಕೆಟ್‌ಗಾಗಿ ಮನವಿ ಸಲ್ಲಿಸುವ ಸಾಲಿನಲ್ಲಿ ನಿಲ್ಲಲಿದ್ದಾರೆ.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....