NEWSನಮ್ಮಜಿಲ್ಲೆನಮ್ಮರಾಜ್ಯ

ಜೆಡಿಎಸ್‌ ಶಾಸಕ ಗೌರಿಶಂಕರ್‌ ಆಯ್ಕೆ ಅನರ್ಹ ಆದೇಶ – ಒಂದು ತಿಂಗಳು ಅಮಾನತಿನಲ್ಲಿಟ್ಟ ಹೈಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮತದಾರರಿಗೆ ನಕಲಿ ಬಾಂಡ್ ಹಂಚಿ ಆಮಿಷವೊಡ್ಡಿದ ಪುಕರಣದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಶಾಸಕ ಡಿ.ಸಿ. ಗೌರಿಶಂಕರ್‌ ಅವರನ್ನು ಕರ್ನಾಟಕ ಹೈಕೋರ್ಟ್  ಅಸಿಂಧುಗೊಳಿಸಿದೆ. ಆದರೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತನ್ನ ಆದೇಶವನ್ನು ಒಂದು ತಿಂಗಳ ಕಾಲ ಅಮಾನತಿನಲ್ಲಿಟ್ಟಿದೆ.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶ ನೀಡಬೇಕು ಎಂಬ ಗೌರಿ ಶಂಕರ್‌ ಪರ ವಕೀಲರು ವಾದಿಸಿದರು. ಅವರ ಮಧ್ಯಂತರ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್‌ ಆದೇಶವನ್ನು ಒಂದು ತಿಂಗಳು ಅಮಾನತಿನಲ್ಲಿರಿಸಿದೆ.

ಗೌರಿ ಶಂಕರ್‌ ಆಯ್ಕೆಯನ್ನು ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್‌ 101 (ಡಿ) ಅಡಿ ಅನೂರ್ಜಿತಗೊಳಿಸಲಾಗಿದೆ ಎಂದು ಪೀಠವು ಆದೇಶದಲ್ಲಿ ಹೇಳಿತ್ತು. ಗೌರಿಶಂಕರ್‌ ಪರ ವಕೀಲರಾದ ಹೇಮಂತ್‌ ರಾಜ್‌ ಅವರು “ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವುದರಿಂದ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 116 (ಬಿ) ‌ಅಡಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ಗೆ ಅಧಿಕಾರವಿದೆ ಎಂದು ಕೋರಿದರು.

ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಪ್ರತಿವಾದಿ ಗೌರಿ ಶಂಕರ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಹೀಗಾಗಿ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿರುವುದರಿಂದ ಆದೇಶವನ್ನು ಅಮಾನತಿನಲ್ಲಿರಿಸಬೇಕು ಎಂದು ಕೋರಿ ಗೌರಿ ಶಂಕರ್‌ ಪರ ವಕೀಲ ಹೇಮಂತ್‌ ರಾಜ್‌ ಅವರು ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ, ಆದೇಶವನ್ನು ಒಂದು ತಿಂಗಳು ಅಮಾನತಿನಲ್ಲಿರಿಸಲಾಗಿದೆ ಎಂದು ಆದೇಶಿಸಿತು.

2018ರ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ತುಮಕೂರು ಗ್ರಾಮಾಂತರ ಕ್ಷೇತ್ರದ 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂದು ಗೌರಿಶಂಕರ್ ವಿರುದ್ಧ ಬಿಜೆಪಿಯ ಮಾಜಿ ಶಾಸಕ ಸುರೇಶ್‌ಗೌಡ ಅವರು ದೂರು ದಾಖಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠ ಇಂದು ತೀರ್ಪು ನೀಡಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...