CrimeNEWSನಮ್ಮಜಿಲ್ಲೆ

ಜೆಡಿಎಸ್‌ ನಗರಸಭೆ ಸದಸ್ಯ ಅಗ್ರಹಾರ ಮುರಳಿ ಮೇಲೆ ಮಚ್ಚು ಲಾಂಗ್‌ಗಳಿಂದ ದಾಳಿ: ಆರೋಪಿಗಳ ಬಂಧನಕ್ಕೆ ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಮುಖಂಡ, ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್‌ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ.

ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ‌ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ ಮೇರೆ ಮೀರಿದೆ. ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಅಧಿಕಾರಿಗಳು ಆಡಳಿತ ಪಕ್ಷ ನಾಯಕರ ಕೈಗೊಂಬೆಗಳು ಆಗಿರುವ ಪರಿಣಾಮವೇ ಇಂಥ ಘಟನೆಗಳಿಗೆ ದಾರಿ ಆಗುತ್ತಿದೆ.

ರಾಜ್ಯದಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದು ಬಿದ್ದಿದೆ. ಮೊದಲು ಇಂಥ ಪ್ರಕರಣಗಳು ನಡೆಯುತ್ತಿರಲಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಹಾಸನದಲ್ಲಿ ಜೆಡಿಎಸ್‌ ಮುಖಂಡರಾದ ಕೃಷ್ಣೇಗೌಡ ಅವರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹೊಳೆನರಸೀಪುರದಲ್ಲಿ ನಮ್ಮ ಪಕ್ಷದ ಮುಖಂಡರಾದ ಅಶ್ವತ್ಥ್ ಅವರ ಮೇಲೆ ದಾಳಿ ನಡೆಡಿತ್ತು. ಈಗ ಚಿಂತಾಮಣಿಯಲ್ಲಿ ಅಂಥದ್ದೇ ಘಟನೆ ನಡೆದಿರುವುದು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ದುಷ್ಟ ಹುನ್ನಾರವಲ್ಲದೆ ಮತ್ತೇನಲ್ಲ ಎಂದು ಹೇಳಿದ್ದಾರೆ.

ಅದರಲ್ಲೂ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ಇದು ಸರಿ ಅಲ್ಲ, ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಸದಾ ಶಾಂತಿ ನೆಲೆಸಿರಬೇಕು ಎನ್ನುವುದು ನಮ್ಮ ಪಕ್ಷದ ಆಶಯ. ಸರ್ಕಾರ ಮತ್ತು ಗೃಹ ಸಚಿವರು ಕೂಡಲೇ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪಕ್ಷದ ವತಿಯಿಂದ ಉಗ್ರವಾದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ‌ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು