NEWSನಮ್ಮರಾಜ್ಯರಾಜಕೀಯ

ಜೆಡಿಎಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಎಲ್ಲ ಸಮುದಾಯದವರ ಬೆಂಬಲ ಬೇಕು : ಕೆ.ಆರ್‌.ನಗರ ಶಾಸಕ ಸಾರಾ ಮಹೇಶ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು : ನನ್ನವರೆಂಬ ಜನ ಎಂದೂ ನನ್ನಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲ ಎಂಬ ಬದ್ಧತೆಯೊಂದಿಗೆ ರಾಜಕೀಯ ಮಾಡುತ್ತಿದ್ದೇನೆ ಎಂದು ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

ಮೈಸೂರಿನ ಕೃಷ್ಣರಾಜ ಪಟ್ಟಣದ ಸಾಯಿ ಸಭಾಂಗಣದಲ್ಲಿ ನಡೆದ ಜಾತ್ಯತೀತ ದಳ ಬೆಂಬಲಿತ ಕುರುಬ ಸಮಾಜದ ಮುಖಂಡರ ಸಭೆ ಉದ್ಘಾಟಿಸಿ ಮಾತನಾಡಿದರು.

2023ರ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಗೆದ್ದು ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂದರೆ ಅದಕ್ಕೆ ಎಲ್ಲ ಧರ್ಮ, ಸಮುದಾಯದವರ ಬೆಂಬಲ ಬೇಕು. ಆ ನಿಟ್ಟನಲ್ಲಿ ಈಗ ಜನರೂ ಕೂಡ ಜೆಡಿಎಸ್‌ ಬೆಂಬಲಿಸಿದರೆ ಭವಿಷ್ಯ ಚೆನ್ನಾಗಿರಲಿದೆ ಎಂಬ ಭಾವನೆ ಹೊಂದಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ನನ್ನ ಕ್ಷೇತ್ರದಲ್ಲಿನ 15 ವರ್ಷದ ನನ್ನ ರಾಜಕಾರಣದಲ್ಲಿ ಅಭಿವೃದ್ಧಿ ವಿಚಾರವಿರಲಿ, ನನ್ನ ವೈಯುಕ್ತಿಕ ಕೊಡುಗೆ ನೀಡುವ ವಿಚಾರವಿರಲಿ ಯಾವುದೇ ಸಂದರ್ಭದಲ್ಲಿ ಜಾತಿ ರಾಜಕೀಯ ಮಾಡಿಲ್ಲ ಎಂದ ಶಾಸಕರು, ರಾಜಕಾರಣ ಎಂಬುದು ಬೇರೆಯವರ ಬದುಕು ಕಟ್ಟಿಕೊಡಲು ಮಾಡಬೇಕೆ ವಿನಃ ರಾಜಕಾರಣಿಗಳು ತಮ್ಮ ಬದುಕು ಕಟ್ಟಿಕೊಳ್ಳುವುದಲ್ಲ ಎಂದು ಹೇಳಿದರು.

ನನ್ನ ಅವಧಿಯಲ್ಲಿ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೊರೊನಾ ಇದ್ದ ಕಾರಣ ಸರಕಾರದಿಂದ ಸಮರ್ಪಕವಾಗಿ ಅನುದಾನ ಬಾರದೆ ಕೆಲವೆಡೆ ಅಭಿವೃದ್ಧಿ ಕೆಲಸ ಮಾಡಲಾಗಿಲ್ಲ. ಕೆಲವರು ಅದನ್ನೇ ದೊಡ್ಡದು ಮಾಡಿ ನನ್ನನ್ನು ಜಾತಿಗೆ ಸೀಮಿತ ಎಂಬಂತೆ ದೂರುತ್ತಿದ್ದಾರೆ. ಆದರೆ, ನಾನು ಜಾತಿವಾದಿಯೋ ಅಲ್ಲವೋ ಎಂಬುದು ತಾಲೂಕಿನ ಜನತೆಗೆ ತಿಳಿದಿದೆ ಎಂದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...