NEWSಆರೋಗ್ಯನಮ್ಮಜಿಲ್ಲೆ

ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಹೇಳಿದರು.

ಬೆಂಗಳೂರು ಗ್ರಾಮಾಂತರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು:
ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು.

ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ