NEWSಆರೋಗ್ಯನಮ್ಮಜಿಲ್ಲೆ

ಕ್ಷಯ ಮುಕ್ತ ದೇಶ ನಿರ್ಮಾಣಕ್ಕೆ ಕೈಜೋಡಿಸಿ: ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಭಾರತವನ್ನು 2025ರ ವೇಳೆಗೆ ಕ್ಷಯ ರೋಗ ಮುಕ್ತವಾಗಿಸುವ ಗುರಿಯನ್ನು ಹೊಂದಿದ್ದು ಇದು ಸಾಕಾರಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಕೆರೆ ನೀಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಾಲೂಕಿನ ಪುನಾಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಇಟಿಐ (ಆಶ್ರಯ ಹಸ್ತ ಸಂಸ್ಥೆ) ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕ್ಷಯ ರೋಗ ಮುಕ್ತ ಪಂಚಾಯಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

2025ಕ್ಕೆ ಕ್ಷಯ ರೋಗ ಮುಕ್ತ ಭಾರತ ನಿರ್ಮಿಸುವ ಸಲುವಾಗಿ ಸರ್ಕಾರವು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದಕ್ಕಾಗಿ ಇದರ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮುಟ್ಟಿಸುವ ಸಲುವಾಗಿ ಕೆಲಸ ಮಾಡುತ್ತಿದೆ. ಈ ರೋಗವು 30 ವರ್ಷಗಳ ಹಿಂದೆ ಬಹಳ ಗಂಭೀರವಾದ ಕಾಯಿಲೆಯಾಗಿತ್ತು. ರೋಗಿಯನ್ನು ಮನೆಯಿಂದ ಅಥವಾ ಊರಿನಿಂದ ಹೊರಗೆ ಹಾಕುತ್ತಿದ್ದರು.

ಒಂದು ಹಂತದಲ್ಲಿ ಈ ಕಾಯಿಲೆ ಕೋವಿಡ್‌ಗಿಂತಲೂ ಜಾಸ್ತಿ ಇತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಸರ್ಕಾರಗಳು ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಾಗೂ ಯೋಜನೆಗಳನ್ನು ರೂಪಿಸಿ, ಔಷಧೋಪಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡುತ್ತಿವೆ. ರೋಗ ನಿಯಂತ್ರಣದಲ್ಲಿ ನಮ್ಮ ಇಲಾಖೆ ಗಮನಾರ್ಹ ಸಾಧನೆ ಮಾಡಿದ್ದು, ಪಂಚಾಯಿತಿ ಹಾಗೂ ಗ್ರಾಮ ಮಟ್ಟದಲ್ಲಿ ಇದನ್ನು ಕೊನೆಗಾಣಿಸಲು ಗ್ರಾಮಸ್ಥರು ಸಹಕಾರ ನೀಡಬೇಕು ಎಂದರು.

ಆಶ್ರಯ ಹಸ್ತ ಸಂಸ್ಥೆಯ ವ್ಯವಸ್ಥಾಪಕ ವಿಕ್ರಂ ಪಾಟೀಲ್ ಮಾತನಾಡಿ, ಕ್ಷಯ ರೋಗವು ಒಂದು ಪುರಾತನ ಕಾಯಿಲೆ ಯಾಗಿದ್ದು ಇದು ಪೌಷ್ಟಿಕ ಆಹಾರದ ಕೊರತೆಯಿಂದ ರೋಗ ಬರುತ್ತಿದೆ ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ರೋಗವನ್ನು ಗುಣಪಡಿಸಿಕೊಳ್ಳಲು ಆರು ತಿಂಗಳ ವರೆಗೆ 500 ರೂ. ಸಹಾಯಧನವನ್ನು ಸರ್ಕಾರ ನೀಡುತ್ತಾ ಬಂದಿರುವ ಪರಿಣಾಮವಾಗಿ ಇಂದು ಕ್ಷಯರೋಗಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ.

ದೇಶದಾದ್ಯಂತ ಕ್ಷಯ ರೋಗ ನಿರ್ಮೂಲನೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ರೋಗಿಗಳಿಗೆ ಪೌಷ್ಟಿಕ ಆಹಾರ ನೀಡುವ ಮೂಲಕ ಈ ಕಾಯಿಲೆ ನಿರ್ಮುಲನೆ ಮಾಡಲು ಸಾಧ್ಯ. ಹಾಗಾಗಿ ಕ್ಷಯ ರೋಗಿಗಳಿಗೆ ಔಷಧ ಎಷ್ಟು ಮುಖ್ಯವೋ ಪೌಷ್ಟಿಕ ಆಹಾರವೂ ಅಷ್ಟೇ ಮುಖ್ಯ, ಆದ್ದರಿಂದ ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಈ ಕಾಯಿಲೆಯಿಂದ ಮುಕ್ತರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕ್ಷಯ ಮುಕ್ತ ಪಂಚಾಯಿತಿ ನಿರ್ಮಾಣ ಮಾಡುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಪಿಡಿಒ, ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ತಂಡ ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನೊಳಗೊಂಡಂತೆ ಸಮಿತಿಯನ್ನು ರಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಶಿವನಂಜುಂಡ, ಸದಸ್ಯರಾದ ಯೋಗಾನಂದ, ಪಿಡಿಒ ಪರಮೇಶ್, ಆಶ್ರಯ ಹಸ್ತ ಸಂಸ್ಥೆಯ ಯೋಜನ ನಿರ್ದೇಶಕ ರಮನ್ ಅರೋರಾ, ವೈದ್ಯಾಧಿಕಾರಿಗಳಾದ ಡಾ.ಏಕ್ತ ನೇಗಿ, ಡಾ.ಅಂಕಿತಾ ಮೊಕಾಶಿ, ಡಾ.ಡೆಲ್ವಿನ್ ಚಟರ್ಜಿ, ಡಾ.ಹರ್ಷ ಅಗರ್ವಾಲ್, ಡಾ.ಗೋವಿಂದರಾಜು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಲತಾ, ಸಿಬ್ಬಂದಿಗಳಾದ ನವಿತಾ, ಸುಗುಣ, ನಿಮಿಷಾ, ಜಗದೀಶ್, ಅಶೋಕ್ ಸೇರಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ