ಚಿತ್ತಾಪುರ: ಪಟ್ಟಣದ ಪತ್ರಕರ್ತನ ಮೇಲೆ ಬೆದರಿಕೆ ಹಾಕಿದ ಅಳ್ಳೋಳ್ಳಿ ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಅಮಾನತ್ತು ಮಾಡಬೇಕು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ಒತ್ತಾಯಿಸಿದ್ದಾರೆ.
ಪಟ್ಟಣದ ತಹಸೀಲ್ ಕಚೇರಿಯಲ್ಲಿ ಸೋಮವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ಅಳ್ಳೋಳ್ಳಿ ಗ್ರಾಮ ಪಂಚಾಯಿತಿಯ 15ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಹಾಗೂ ಖರ್ಚು ವೆಚ್ಚದ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದ ಪತ್ರಕರ್ತ ನಾಗಯ್ಯ ಸ್ವಾಮಿಗೆ ಪಿಡಿಒ ದೇವಿಂದ್ರಪ್ಪ ಭಾಲ್ಕಿ ಬೆದರಿಕೆ ಹಾಕಿದ್ದಾರೆ.
ಗ್ರಾಪಂನಲ್ಲಿ ಅವ್ಯವಹಾರ ನಡೆದಿದೆ ಎಂದು ದೂರುಗಳು ಬಂದಿದ್ದು, ಸಮಗ್ರ ಮಾಹಿತಿಯೊಂದಿಗೆ ವರದಿ ಮಾಡುವುದಕ್ಕಾಗಿ ಮಾರ್ಚ್ 1ರಂದು 15ನೇ ಹಣಕಾಸಿನಲ್ಲಿ 2023-24, 2024-25 ನೇ ಸಾಲಿನಲ್ಲಿ ನಡೆದ ಕಾಮಗಾರಿಗಳು, ಖರ್ಚಾದ ಅನುದಾನದ ಬಗ್ಗೆ ಮಾಹಿತಿ ನೀಡಿವಂತೆ ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದರು.
ಮಾರ್ಚ್ 5ರಂದು ಮಧ್ಯಾಹ್ನ 1.53ಕ್ಕೆ ಗ್ರಾಮ ಪಂಚಾಯಿತಿ ಪಿಡಿಒ ದೇವಿಂದ್ರಪ್ಪ ಭಾಲ್ಕಿ ಪತ್ರಕರ್ತನಿಗೆ ಕರೆ ಮಾಡಿ, ಬ್ಲಾಕ್ ಮೇಲ್ ಮಾಡುವುದಕ್ಕಾಗಿ ಆರ್‌ಟಿಐ ಅಡಿ ಮಾಹಿತಿ ಕೇಳುತ್ತಿದ್ದೀಯಾ, ನಿನ್ನ ವಿರುದ್ಧ ಕೇಸ್ ದಾಖಲಿಸಿ ಒಳಗೆ ಹಾಕಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ.
ಅದಷ್ಟೇ ಅಲ್ಲದೆ ಕೆಟ್ಟದಾಗಿ ನಿಂದಿಸುವುದರ ಮೂಲಕ ದರ್ಪ ಮೆರೆದು ಅವಹೇಳನ ಮಾಡಿದ್ದಾರೆ. ಈ ಬಗ್ಗೆ ಪಿಡಿಒ ವಿರುದ್ಧ ಕ್ರಮಕೈಗೊಳ್ಳಬೇಕೆಂದು ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ನಾಗಯ್ಯ ಸ್ವಾಮಿ ದೂರು ನೀಡಿದ್ದಾರೆ. ಆದರೆ ಇದುವರೆಗೂ ಕ್ರಮಕೈಗೊಂಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನಲ್ಲಿ ಹಲವು ವರ್ಷಗಳಿಂದ ನಾವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿದ್ದೇವೆ. ಸಂವಿಧಾನದ 4ನೇ ಅಂಗವಾಗಿ ಶಿಸ್ತುಬದ್ಧ ಆಡಳಿತದ ಹಂಬಲ ಹೊತ್ತು ಕೆಲಸ ಮಾಡಿಕೊಂಡು ಬರುತ್ತಿವೆ. ಹಿಂದೆ ಬೇರೆ ಗ್ರಾಪಂನಲ್ಲಿ ಕಾರ್ಯನಿರ್ವಹಿಸಿದ ಕಾಮಗಾರಿಗಳ ಬಗ್ಗೆ ತನಿಖೆ ಮಾಡಬೇಕು. ಈ ಕೂಡಲೇ ಸಂಬಂಧಪಟ್ಟ ಪಿಡಿಒ ವಿರುದ್ಧ ಶಿಸ್ತು ಕ್ರಮ ಜಾರಿ ಮಾಡಬೇಕು. ಕನಿಷ್ಠ ಸೌಜನ್ಯವಿಲ್ಲದೆ ಮಾತನಾಡಿದ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕೆಂದು ಸಂಘವು ಒತ್ತಾಯಿಸಿದೆ.
ತಹಸೀಲ್ದಾರ್ ನಾಗಯ್ಯ ಹಿರೇಮಠ ಮನವಿ ಪತ್ರ ಸ್ವೀಕರಿಸಿ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ವೀರೇಂದ್ರಕುಮಾರ ಕೊಲ್ಲೂರ, ತಾಲೂಕು ಸಂಘದ ಪದಾಧಿಕಾರಿಗಳಾದ ಮಡಿವಾಳಪ್ಪ ಹೇರೂರ, ರಾಯಪ್ಪ ಕೋಟಗಾರ, ಅನಂತನಾಗ ದೇಶಪಾಂಡೆ, ಸಂತೋಷಕುಮಾರ ಕಟ್ಟಿಮನಿ, ದಯಾನಂದ ಖಜೂರಿ, ಅಣ್ಣರಾಯ ಮಾಡಬೂಳಕರ್, ಪ್ರಥ್ವಿರಾಜ ಸಾಗರ, ಚಂದ್ರಶೇಖರ ಬಳ್ಳಾ, ನಾಗಯ್ಯಸ್ವಾಮಿ ಅಲ್ಲೂರ ಸೇರಿದಂತೆ ಇತರರಿದ್ದರು.
Related

You Might Also Like
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...
ಕೊಪ್ಪಳ: ಭಾರೀ ಮಳೆಗೆ ಕುಸಿದ ಮನೆ ಒಂದೂವರೆ ವರ್ಷದ ಮಗು ಸಾವು, 6 ಮಂದಿಗೆ ಗಾಯ
ಕೊಪ್ಪಳ: ಭಾರೀ ಮಳೆಗೆ ಮನೆ ಕುಸಿದು ಒಂದೂವರೆ ವರ್ಷದ ಮಗುವೊಂದು ಮೃಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮನೆ...