NEWSನಮ್ಮಜಿಲ್ಲೆನಮ್ಮರಾಜ್ಯ

KSRTCಯ ಉಚಿತ ಬಸ್‌ಪಾಸ್ ಪಡೆಯುವ ಪತ್ರಕರ್ತರು ಜೂ.20 ರೊಳಗೆ ಅರ್ಜಿ ಸಲ್ಲಿಸಿ: ಆಯುಕ್ತ ಹೇಮಂತ್ ನಿಂಬಾಳ್ಕರ್

2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೀಗಾಗಿ ರಾಜ್ಯದ ಎಲ್ಲ ತಾಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ 2026ರ ಜೂನ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಹೇಳಿದ್ದಾರೆ.

2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್‌ಪಾಸ್‌ಗಳನ್ನು ನೀಡುತ್ತಿದೆ ಎಂದು ವಿವರಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ