NEWSನಮ್ಮಜಿಲ್ಲೆನಮ್ಮರಾಜ್ಯ

ಕರ್ನಾಟಕ ಹೈಕೋರ್ಟ್‌ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯ ನ್ಯಾಯಮೂರ್ತಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಇದಕ್ಕೂ ಮೊದಲು, 59 ವರ್ಷದ ನ್ಯಾಯಮೂರ್ತಿ ಬಖ್ರು ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅವರನ್ನು ಬಡ್ತಿ ನೀಡಲಾಗಿದ್ದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಮಾಡಿದ ಶಿಫಾರಸುಗಳನ್ನು ಆಧರಿಸಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ನ್ಯಾಯಾಧೀಶರಾದ ವಿ.ಕಾಮೇಶ್ವರ ರಾವ್, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್ (ಬೈರತಿ), ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ.

ವಿಧಾನಪರಿಷತ್ ಸದಸ್ಯರಾದ ನಾಗರಾಜ ಯಾದವ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಬಿ.ಬಿ.ಕಾವೇರಿ, ಸೇರಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಇತರೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ...