ಜೂ.27ರಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳ ಆವತಿಯಿಂದ ಜ್ಯೋತಿ ರಥ ಯಾತ್ರೆ ಆರಂಭ
ಅಂದು ಬೆಳಗ್ಗೆ8 ಕ್ಕೆ ಅವತಿ ಗ್ರಾಮದಲ್ಲಿ ಜ್ಯೋತಿ ರಥಯಾತ್ರೆಗೆ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಲಿದ್ದು, ಯಾತ್ರೆಯು ಬೆಂಗಳೂರಿನ ಕೆಂಗೇರಿ ಬಳಿಯ ಕೆಂಪೇಗೌಡ ಬಡಾವಣೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ತಲುಪಲಿದೆ.
Deva25.06.2026

ಬೆಂಗಳೂರು: ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಅಂಗವಾಗಿ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಕೆಂಪೇಗೌಡರ ಮೂಲಸ್ಥಳವಾದ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಿಂದ ಕೆಂಪೇಗೌಡ ಜ್ಯೋತಿ ರಥ ಯಾತ್ರೆ ಹೊರಡಲು ಆವತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ8 ಕ್ಕೆ ಅವತಿ ಗ್ರಾಮದಲ್ಲಿ ಜ್ಯೋತಿ ರಥಯಾತ್ರೆಗೆ ಆಹಾರ ನಾಗರಿಕ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಲಿದ್ದು, ಜ್ಯೋತಿ ರಥಯಾತ್ರೆಯು ಬೆಂಗಳೂರಿನ ಕೆಂಗೇರಿ ಬಳಿಯ ಕೆಂಪೇಗೌಡ ಬಡಾವಣೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ತಲುಪಲಿದೆ.
ಆವತಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಲ್ಲ ಸಮುದಾಯದ ಮುಖಂಡರುಗಳು, ಕನ್ನಡ ಪರ ಸಂಘಟನೆಗಳು, ಎಲ್ಲ ಸಂಘ-ಸಂಸ್ಥೆಯ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು/ ಸಿಬ್ಬಂದಿಗಳು ಭಾಗವಹಿಸಿ ಎಂದು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Related
Deva







