ಕೆ.ಆರ್.ಪೇಟೆ: ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಓಟದ ಸ್ಪರ್ಧೆ- ವಿಜೇತ ಮೂವರಿಗೆ ಬೈಕ್ ನಗದು ಬಹುಮಾನ
- 50 ಜೋಡಿ ಹಳ್ಳಿಕಾರ್ ಎತ್ತು- ಹೋರಿಗಳು ಸ್ಪರ್ಧೆಯಲ್ಲಿ ಭಾಗಿ
ಕೆ.ಆರ್.ಪೇಟೆ: ಗ್ರಾಮೀಣ ಭಾಗದ ಕ್ರೀಡೆಗಳು ನಶಿಸಿ ಹೋಗುತ್ತಿರುವ ಇಂದಿನ ದಿನಗಳಲ್ಲಿ ಅಘಲಯ ಗ್ರಾಮದ ಯುವ ಮುಖಂಡ ಅಜಯ್ ರಾಮೇಗೌಡ ಬಳಗ ಗ್ರಾಮದಲ್ಲಿ ಮೊದಲ ಬಾರಿಗೆ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಪರ್ಧೆ ಏರ್ಪಡಿಸಿರುವುದು ಸಂತೋಷದ ವಿಚಾರವಾಗಿದೆ ಎಂದು ಶಾಸಕ ಎಚ್.ಟಿ.ಮಂಜು ಹೇಳಿದರು.
ಕೆ.ಆರ್.ಪೇಟೆ ತಾಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಅಘಲಯ ಗ್ರಾಮದಲ್ಲಿ ಶ್ರೀ ಹೊನ್ನಾಲದಮ್ಮದೇವಿ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿಯ ಆಶೀರ್ವಾದದಿಂದ ಇದೇ ಪ್ರಥಮ ಬಾರಿಗೆ ಅಜಯ್ ರಾಮೇಗೌಡ, ಹಳ್ಳಿಕಾರ್ ಸಂರಕ್ಷಕ ಸಂದೀಪ್ ಅವರ ನೇತೃತ್ವದಲ್ಲಿ ನಡೆದ ಮೊದಲ ವರ್ಷದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ತಾಲೂಕಿನ ಸಾಂಸ್ಕೃತಿಕ ಇತಿಹಾಸ ಹೊಂದಿರುವ ಅಘಲಯ ಗ್ರಾಮದ ಹಿರಿಯರ ಸಹಕಾರದಿಂದ ನಮ್ಮ ಪಕ್ಷದ ಕ್ರಿಯಾಶೀಲ ಯುವ ಮುಖಂಡರಾದ ಅಜಯ್ ರಾಮೇಗೌಡರ ಯುವ ಬಳಗದ ಸಾರಥ್ಯದಲ್ಲಿ ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ.
ಎತ್ತಿನ ಗಾಡಿ ಓಟವು ನಮ್ಮ ನೆಲದ ಗ್ರಾಮೀಣ ಸೊಗಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ತಾತ, ಮುತ್ತಾತರ ಕಾಲದಿಂದಲೂ ಹಳ್ಳಿಕಾರ್ ತಳಿಯ ಉತ್ತಮ ರಾಸುಗಳನ್ನು ರೈತರು ಪ್ರೀತಿಯಿಂದ ಸಾಕುತ್ತಿದ್ದಾರೆ. ನಿಜವಾದ ಪ್ರಾಣಿ ಪ್ರಿಯರಿಗೆ ಇಂತಹ ಸ್ಪರ್ಧೆಗಳು ಪ್ರೇರಣೆ ಹಾಗೂ ಸ್ಫೂರ್ತಿಯನ್ನು ನೀಡುತ್ತವೆ.
ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಸೋಲು-ಗೆಲುವು ಎರಡನ್ನೂ ಸಮನಾಗಿ ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಬೇಕು. ಸ್ಪರ್ಧೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮೀಣ ಕ್ರೀಡೆಗಳ ಬಗ್ಗೆ ಇಂದಿನ ಯುವಕರು ಹೆಚ್ಚಿನ ಆಸಕ್ತಿ ತೋರಿಸಿ, ದನ ಕರುಗಳನ್ನು ಪ್ರೀತಿಸಬೇಕು ಎಂದು ಶಾಸಕ ಮಂಜು ತಿಳಿಸಿದರು.
ಕಾರ್ಯಕ್ರಮ ಕುರಿತು ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, TAPCMS ಮಾಜಿ ಅಧ್ಯಕ್ಷ ಎ.ಎಸ್. ಶ್ರೀಧರ್, PLD ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ್ ಮಾತನಾಡಿದರು. ಹೋಯ್, ಹೋಯ್ ಎಂದು ಕೂಗುತ್ತ, ಎತ್ತುಗಳ ಮೈ ತಟ್ಟುತ್ತ ಚುರುಕು ಮುಟ್ಟಿಸುತ್ತಿದ್ದರು. ನಾಗಾಲೋಟದಲ್ಲಿ ಓಡುತ್ತಿದ್ದ ಎತ್ತುಗಳು. ಇನ್ನು ಕೆಲವು ಸ್ಪರ್ಧಿಗಳು ಎತ್ತುಗಳಿಗೆ ಕಟ್ಟಿರುವ ಹಗ್ಗದ ಸನ್ನೆಯ ಮೂಲಕವೇ ಗೆಲುವಿನ ದಡ ಸೇರುತ್ತಿದ್ದರು. ನೆರೆದ ಪ್ರೇಕ್ಷ ಕರು ಶಿಳ್ಳೆ, ಚಪ್ಪಾಳೆಗಳ ಮೂಲಕ ಹುರಿದುಂಬಿಸಿದರು.
ಸ್ಪರ್ಧೆಗಾಗಿ ರಾಜ್ಯದ ವಿವಿಧ ಭಾಗಗಳಿಂದ ಹಳ್ಳಿಕಾರ್, ಗಿಡ್ಡಗಾಡು ಹೋರಿ ಸೇರಿದಂತೆ ವಿವಿಧ ಹಳ್ಳಿಕಾರ್ ಜಾತಿಯ 50ಕ್ಕೂ ಹೆಚ್ಚು ಜೋಡಿ ಎತ್ತುಗಳು ಸ್ಪರ್ಧಯಲ್ಲಿ ಭಾಗವಹಿಸಿ ಗೆಲುವಿಗಾಗಿ ಸೆಣಸಾಡಿದರು. ಜೋಡಿ ಎತ್ತುಗಳ ಗಾಡಿ ಓಡಿಸುವ ಸವಾರರು ಗೆಲುವಿಗಾಗಿ ಹರಸಾಹಸಪಟ್ಟರು.
ಸ್ಪರ್ಧೆಯಲ್ಲಿ ವಿಜೇತರಾದ ಜೋಡಿ ಎತ್ತುಗಳ ಮಾಲೀಕರಿಗೆ ಪ್ರಥಮ ಬಹುಮಾನ ಒಂದು ಹೀರೋ ದ್ವಿಚಕ್ರ ವಾಹನ ಜೊತೆಗೆ ₹30.000, ದ್ವಿತೀಯ ಬಹುಮಾನ ಒಂದು ಹೀರೋ ದ್ವಿಚಕ್ರ ವಾಹನ ಜೊತೆ 20ಸಾವಿರ ರೂ.ನಗದು ತೃತೀಯ ಬಹುಮಾನ 10ಸಾವಿರ ರೂ ನಗದು ಮತ್ತು ಹೀರೋ ದ್ವಿಚಕ್ರ ವಾಹನ, 4ನೇ ಬಹುಮಾನ 30ಸಾವಿರ ರೂ. ನಗದು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಾರ್ಥಿಗಳಿಗೆ ಸಮಾಧಾನಕರ ಬಹುಮಾನವಾಗಿ ಸುಂದರವಾದ ಟ್ರೋಫಿಯನ್ನು ನೀಡಲಾಗುವುದು ಎಂದು ಆಯೋಜಕರಾದ ನಂದೀಶ್ ತಿಳಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಘಲಯ ರಮೇಶ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎ.ಎಸ್.ಶ್ರೀಧರ್, ಮುಖಂಡರಾದ ನಾಗೇಂದ್ರ, ರಾಜೇಗೌಡ, ರಾಜೇಶ್, ವೆಂಕಟೇಶ್, ಮುನಿರಾಜು, ನವೀನ್, ನಿಂಗರಾಜು, ನಿಶ್ಚಿತ, ವೆಂಕಟೇಶ್, ಯೋಗಣ್ಣ, ರಾಮಣ್ಣ, ಗಣೇಶ, ಬಲರಾಮ್, ಸತೀಶ್, ಸ್ಪರ್ಧೆಯ ಆಯೋಜಕರಾದ ಅಜಯ್ ರಾಮೇಗೌಡ, ನಂದೀಶ್, ಸಂದೀಪ್, ವಿಷ್ಣುಗೌಡ, ಹರ್ಷ ಸಚಿನ್ ಗ್ರಾಮಸ್ಥರು ಉಪಸ್ಥಿತರಿದ್ದರು.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...