CrimeNEWS

ಕಲಬುರಗಿ: ಕೆಕೆಆರ್‌ಟಿಸಿ ಸಿಟಿ ಬಸ್‌ ನಿಲ್ದಾಣದಲ್ಲಿ ಹಾಡಹಗಲೇ ಚಾಲಕನ ಬರ್ಬರ ಹತ್ಯೆ – ಬೆಚ್ಚಿಬಿದ್ದ ಜನತೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ನಗರದ ಸಿಟಿ ಬಸ್‌ ನಿಲ್ದಾನದಲ್ಲಿ ಬಸ್‌ ನಿಲ್ಲಿಸಿ ಊಟ ಊಟ ಮಾಡಿಕೊಂಡು ಬಸ್‌ನಿಂದ ಕೆಳಗೆ ಇಳಿದ ಚಾಲಕನನ್ನು 3-4 ಜನರಿದ್ದ ಕಿಡಿಗೇಡಿಗಳ ಗುಂಪು ಹತ್ಯೆ ಗೈದು ಪರಾರಿಯಾಗಿದೆ.

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗದ ಕಲಬುರಗಿ ಘಟಕ -3ರ ಚಾಲಕ, ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಿವಾಸಿ ನಾಗಯ್ಯ ಸ್ವಾಮಿ (45) ಹತ್ಯೆಯಾದವರು.

ಗುರುವಾರ ಮಧ್ಯಾಹ್ನ ಸಿಟಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಿಲ್ದಾಣಕ್ಕೆ ಬಂದು ಬಸ್ ನಿಲ್ಲಿಸಿ ಬಸ್‌ನಲ್ಲೇ ಊಟ ಮಗಿಸಿಕೊಂಡು ಕೆಳಗಿಳಿಯುತ್ತಿದ್ದ ವೇಳೆ 3-4 ಜನ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬೀಸಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನೂರಾರು ಜನರ ಮುಂದೆಯೇ ಕೊಚ್ಚಿ ಕೊಲೆ ಮಾಡಿದ್ದರಿಂದ ನಿಲ್ದಾಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು.

ಕಿಡಿಗೇಡಿಗಳು ದಾಳಿ ಮಾಡಿದ ವೇಳೆ ನಾಗಯ್ಯ ಸ್ವಾಮಿ ಅವರ ಕೈ ಹೆಬ್ಬೆರಳು ತುಂಡಾಗಿದೆ. ತಕ್ಷಣ ನಾಗಯ್ಯ ಅಲ್ಲಿಂದ ಓಡಿ ಹೋಗುತ್ತಿದ್ದಂತೆ ಬೆನ್ನಟ್ಟಿದ ಪಾತಕಿಗಳು ಹಿಂದಿನಿದಲೇ ಮಾರಕಾಸ್ತ್ರಗಳನ್ನು ಬೀಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬ್ರಹ್ಮಪುರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಕೊಲೆಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?