CrimeNEWSನಮ್ಮಜಿಲ್ಲೆ

ಕಲಬುರಗಿ: 1.54 ಲಕ್ಷ ರೂಪಾಯಿ ಮೌಲ್ಯದ ಮದ್ಯ, ಕಾರು ಜಪ್ತಿ ವ್ಯಕ್ತಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: 1.54 ಲಕ್ಷ ರೂಪಾಯಿ ಮೌಲ್ಯದ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕಾರು ಸಮೇತ ಅಬಕಾರಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್.ಎನ್ ಗ್ರಾಮದ ಬಳಿ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ಕಾರ್​​ನಲ್ಲಿ ಅಕ್ರಮವಾಗಿ 214 ಲೀಟರ್ ಮದ್ಯ, 117 ಲೀಟರ್ ಬಿಯರ್ ಸೇರಿ ಒಟ್ಟು 1.54 ಲಕ್ಷ ರೂಪಾಯಿ ಮೌಲ್ಯದ ಮದ್ಯ ಸಿಕ್ಕಿದೆ.

ಕಾರಿನಲ್ಲಿ ರಾಜರೋಷವಾಗಿ ಮದ್ಯ ಕೊಂಡೊಯ್ಯಲಾಗುತ್ತಿತ್ತು ಈ ವೇಳೆ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಿಂದ ಹಿಪ್ಪರಗಾ ಎಸ್.ಎನ್. ಗ್ರಾಮದ ಕಡೆಗೆ ಕಾರು ತೆರಳುತ್ತಿತ್ತು. ಅದನ್ನು ಗಮನಿಸಿದ ಸಿಪಿಐ ಕವಿತಾ ನೇತೃತ್ವದ ಅಬಕಾರಿ ತನಿಖಾ‌ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಮದ್ಯ ಜಪ್ತಿ ಮಾಡಿದ್ದಾರೆ.

ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ ಎಲ್ಲ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣು ಇಡಲಾಗಿದೆ. ಆದರೂ ಕೂಡ ಅಕ್ರಮವಾಗಿ ಹಣ ಹೆಂಡ ಸಾಗಾಟ ನಡೆಸುತ್ತಿರುವುದು ಮಾತ್ರ ತಪ್ಪಿಲ್ಲ. ಇನ್ನು ಅಕ್ರಮ ಎಸಗುವವರಿಗೆ ಅಬಕಾರಿ ತಂಡ ಚುರುಕು ಮುಟ್ಟಿಸುತ್ತಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...