CrimeNEWSನಮ್ಮಜಿಲ್ಲೆ

ಕನಕಪುರ: ಬಿಸಿಲ ಬೇಗೆಯಿಂದ ಬಳಲಿ ಮೃತಪಟ್ಟ 14 ವರ್ಷದ ಕಾಡಾನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕನಕಪುರ: ಅತ್ತ ನೀರಿಲ್ಲದೆ ಇತ್ತ ವಾತಾವರಣದ ಬಿಸಿ ತಾಳಲಾರದೆ ಕಾಡಾಣೆಯೊಂದು ಮೃತಪಟ್ಟ ಘಟನೆ ಯಲವನತ್ತ ವನ್ಯ ಜೀವಿ ಸಂರಕ್ಷಣಾ ಪ್ರದೇಶದಲ್ಲಿ ನಡೆದಿದೆ.

ರಾಂನಗರ ಜಿಲ್ಲೆಯ ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್‌ನಲ್ಲಿ ಕಾಡಾನೆಯೊಂದು ಮೃತಪಟ್ಟಿದೆ. ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿದ್ದ 14 ವರ್ಷದ ಗಂಡಾನೆ ಕಾಡಂಚಿನಲ್ಲಿ ಕೊನೆಯುಸಿರೆಳೆದಿದೆ. ನಿತ್ರಾಣಗೊಂಡಿದ್ದ
ಕಾಡಾನೆಗೆ ಅರಣ್ಯ ಸಿಬ್ಬಂದಿಗಳು ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.

ಇತ್ತೀ ಚೆಗಷ್ಟೆ ನಿತ್ರಾಣಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಗಳು ಕಾಡಿಗಟ್ಟಿದ್ದರು. ಆದರೀಗ ಬಿಸಿಲಿನ ಬೇಗೆ ಹೆಚ್ಚುತ್ತಿದ್ದು, ಕಾಡಿನಲ್ಲಿ ನೀರು ಸಿಗದೆ ಆನೆ ಕೊನೆಯುಸಿರೆಳೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಎಫ್ಒ ರಾಮಕೃಷ್ಣಪ್ಪ , ಕನಕಪುರ ಎಸಿಎಫ್ ಗಣೇಶ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ