NEWSನಮ್ಮಜಿಲ್ಲೆನಮ್ಮರಾಜ್ಯ

ಕೇಂದ್ರ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ: ವಂದಿತಾ ಶರ್ಮಾ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇಂದು ಆದೇಶ ಹೊರಡಿಸಿರುವ ಅವರು, ಕನ್ನಡವನ್ನು ಕರ್ನಾಟಕ ರಾಜ್ಯದ ಅಡಳತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ, 1953ರಲ್ಲಿ ನಿರ್ದಿಷ್ಟಪಡಿಸಲಾಗಿದೆ. ಕರ್ನಾಟಕದಲ್ಲಿ, ಕನ್ನಡವು ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ.

ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಚನೆಯಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರ ಸಂ.ಕಅಪ್ರಾ: ಅ:213:2022: ದಿನಾಂಕ: 06-08-2022ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ ಪ್ರಸ್ತಾಪಿಸಿರುತ್ತಾರೆ. ಈ ಬಗ್ಗೆ ವೇದಿಕೆ ಮೇಲೆ ಆಳವಡಿಸಲಾಗುವ ಪರದೆಗಳಲ್ಲಿ ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯನ್ವಯ, ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದ್ದೆಂದು ಸರ್ಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳಿಗೂ ಸೂಚನೆ ನೀಡತ್ತಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ