Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್‌.ಪೇಟೆ: ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು ಎಂದು ತೆಂಡೆಕೆರೆ ಬಾಳೆಹೊನ್ನೂರು ಶಾಖಾಮಠದ ಪೀಠಾಧಿಗಳಾದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.

ಅವರು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಹೊನ್ನೇನಹಳ್ಳಿ ವೇಣು ನೇತೃತ್ವದಲ್ಲಿ ಇಂದು ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸಾವಿರಾರು ವರ್ಷಗಳ ಭವ್ಯ ಇತಿಹಾಸ ಹಾಗೂ ಪರಂಪರೆ ಹೊಂದಿರುವ ಕನ್ನಡ ಭಾಷೆಯು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಎಂಟು ಜ್ಞಾನ ಪೀಠ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಕನ್ನಡ ಭಾಷೆಗೆ ಸಲ್ಲುತ್ತದೆ. ಕನ್ನಡ ಭಾಷೆ, ನೆಲ ಜಲಕ್ಕೆ ಹಾಗೂ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಎದುರಾದ ಸಂದರ್ಭದಲ್ಲಿ ಕನ್ನಡಿಗರು ಬೀದಿಗಿಳಿದು ಹೋರಾಟ ನಡೆಸಲು ಸದಾ ಸಿದ್ದರಾಗಿರಬೇಕು ಎಂದು ಸ್ವಾಮೀಜಿ ಕರೆ ನೀಡಿದರು.

ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸುಷ್ಮಾ, ಕರವೇ ಪದವೀಧರ ಘಟಕದ ಗೌರವ ಅಧ್ಯಕ್ಷ ಚಿಕ್ಕೋನಹಳ್ಳಿ ಚೇತನ್ ಕುಮಾರ್, ಕರವೇ ಜಿಲ್ಲಾಧ್ಯಕ್ಷ ವೇಣು, ಉಪಾಧ್ಯಕ್ಷ ಸಾಸಲು ಗುರುಮೂರ್ತಿ, ಕರವೇ ತಾಲೂಕು ಘಟಕದ ಅಧ್ಯಕ್ಷ ಟೆಂಪೋ ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ಮದನ್ ಸೇರಿದಂತೆ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್