NEWSನಮ್ಮಜಿಲ್ಲೆನಮ್ಮರಾಜ್ಯ

ಫೆ.28ರೊಳಗೆ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಈ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇದಕ್ಕೂ ಮೊದಲು 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ.60 ಕನ್ನಡ ಭಾಷೆ ಹಾಗೂ ಶೇ.40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು ಎಂದು ವಿವರಿಸಿದರು.

ಇನ್ನು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ.

ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು. ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಶಾಂತಿಯುತ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದರು.

3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು, ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...