NEWSನಮ್ಮಜಿಲ್ಲೆನಮ್ಮರಾಜ್ಯ

ಕನ್ನಡ ರಾಜ್ಯೋತ್ಸವದಲ್ಲಿ ಓಲೈಕೆ ನೆಪದಲ್ಲಿ ಪತ್ರಕರ್ತರಿಗೆ ಅಪಮಾನ ಆರೋಪ: ಕಾರ್ಯಕ್ರಮ ಬಹಿಷ್ಕಾರ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ನಾಡು-ನುಡಿ, ನೆಲ-ಜಲದ ಸಂಸ್ಕೃತಿ ಅರಿಯದ ಅವಿವೇಕಿಯನ್ನು ಮುಖ್ಯ ಭಾಷಣಕಾರರಾಗಿ ಆಯ್ಕೆ ಮಾಡಿದ ತಾಲೂಕು ಆಡಳಿತದ ವಿರುದ್ಧ ಬೇಸತ್ತ ಪತ್ರಕರ್ತರು ಕಾರ್ಯಕ್ರಮದಿಂದ ಹೊರ ನಡೆದ ಘಟನೆ ತಾಲೂಕಿನಲ್ಲಿ ವರದಿಯಾಗಿದೆ.

ಪಟ್ಟಣದ ಗೋಣಿಕೊಪ್ಪ ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಕೆ.ಚಂದ್ರಮೌಳಿ ಧ್ವಜಾರೋಹಣ ನಡೆಸಿದ ನಂತರ ಸಭಾ ಕಾರ್ಯಕ್ರಮ ಆರಂಭವಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕರಿಮುದ್ದನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಆರ್.ಮಹದೇವ್ ಅವರು, ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡನಾಡು-ನುಡಿ, ಕನ್ನಡಭಾಷೆ ಕನ್ನಡಕ್ಕಾಗಿ ಹೋರಾಟ ಮಾಡಿದವರ ಮತ್ತು ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಅದರ ಮಹತ್ವವನ್ನು ಹೇಳುವ ಬದಲಿಗೆ ಕಾರ್ಯಕ್ರಮದುದ್ದಕ್ಕೂ ಜನಪ್ರತಿನಿಧಿಗಳು ಹಾಗೂ ಕೆಲವೇ ಪತ್ರಕರ್ತರನ್ನು ಓಲೈಕೆ ಮಾಡಲು ಶುರುಮಾಡಿದರು ಎಂದು ಪತ್ರಕರ್ತರು ಆರೋಪಿಸಿದರು.

ಈ ವೇಳೆ ತಾಲೂಕಿನ ಇತಿಹಾಸವನ್ನು ಸುಳ್ಳು ಸುಳ್ಳಾಗಿ ಅರ್ಥೈಸಲು ಮುಂದಾದರು, ಇದರಿಂದ ಬೇಸತ್ತಿದ ಸ್ವಾಭಿಮಾನಿ ಪತ್ರಕರ್ತರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ಹೊರ ನಡೆಯಲು ಮುಂದಾದರು. ಈ ಸಂದರ್ಭದಲ್ಲಿ ವಿಷಯ ತಿಳಿದ ತಾಲೂಕು ಆಡಳಿತ ಪತ್ರಕರ್ತರನ್ನು ಮನವೊಲಿಸಿ ಸಮಾಧಾನ ಪಡಿಸಲು ಮುಂದಾದರು.

ಆದರೆ, ಕ್ಯಾರೇ ಎನ್ನದ ಸ್ವಾಭಿಮಾನಿ ಪತ್ರಕರ್ತರು ಇತರರ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಭಾಷಣ ಮಾಡುವವರನ್ನು ಮುಂದಿನ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿ ಕಾರ್ಯಕ್ರಮ ಬಹಿಷ್ಕಾರ ಮಾಡಿದರು.

ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್, ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ, ಪುರಸಭಾ ಮುಖ್ಯಾಧಿಕಾರಿ ಮಹೇಂದ್ರ, ಅಧ್ಯಕ್ಷ ಮಹೇಶ್, ಉಪಾಧ್ಯಕ್ಷೆ ಪಿ.ಕೆ.ಆಶಾ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಇದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ