NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕ ಹೈಕೋರ್ಟ್ ನ್ಯಾ.ಸೋಮಶೇಖರ್ ಮಣಿಪುರ ಹೈಕೋರ್ಟ್ ಸಿಜೆಯಾಗಿ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಸಂವಿಧಾನದ 217ನೇ ವಿಧಿಯಡಿ ಪ್ರದತ್ತವಾದ ಅಧಿಕಾರ ಬಳಸಿ ರಾಷ್ಟ್ರಪತಿಗಳು ನ್ಯಾ.ಕೆ.ಸೋಮಶೇಖರ್ ಅವರನ್ನು ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿದ್ದಾರೆ. ನ್ಯಾ.ಸೋಮಶೇಖರ್ ಅವರು ಅಧಿಕಾರ ಸ್ವೀಕರಿಸುವ ದಿನದಿಂದ ಈ ಅಧಿಸೂಚನೆ ಜಾರಿಗೆ ಬರಲಿದೆ ಎಂದು ಕೇಂದ್ರ ಕಾನೂನು ಸಚಿವಾಲಯದ ತಿಳಿಸಿದೆ.

ಇನ್ನು ಹಾಳಿ ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಕೃಷ್ಣಕುಮಾರ್ ಅವರು ಇದೇ ಮೇ 21ರಂದು ಅಂದರೆ ನಾಳೆ ನಿವೃತ್ತಿ ಹೊಂದಲಿರುವ ಹಿನ್ನೆಲೆಯಲ್ಲಿ ನ್ಯಾ.ಕೆ.ಸೋಮಶೇಖರ್ ಅವರನ್ನು ಆ ಹುದ್ದೆಗೆ ನೇಮಕ ಮಾಡಲು ಮೇ 15ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ನಿರ್ಧರಿಸಿ, ಶಿಫಾರಸು ಮಾಡಿತ್ತು.

ನ್ಯಾ.ಸೋಮಶೇಖರ್ ಅವರು 1990ರ ಜನವರಿ 27ರಂದು ವಕೀಲರಾಗಿ ನೋಂದಾಯಿಸಿದ್ದು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ವಿಭಾಗದಲ್ಲಿ ಪ್ರಾಕ್ಟೀಸ್ ನಡೆಸಿದ್ದರು.

1998ರ ಜೂನ್ 17ರಂದು ನೇರವಾಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ವಿಜಯಪುರದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ, ಆ ನಂತರ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಲ್ಲೂ ಸೇವೆ ಸಲ್ಲಿಸಿದ್ದಾರೆ.

ಹೈಕೋರ್ಟ್ನ ನ್ಯಾಯಾಂಗ ಮತ್ತು ವಿಚಕ್ಷಣಾ ರಿಜಿಸ್ಟ್ರಾರ್ ಆಗಿಯೂ ಕೆಲಸ ಮಾಡಿರುವ ನ್ಯಾ. ಸೋಮಶೇಖರ್, 2016ರ ನವೆಂಬರ್ 14ರಂದು ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು, 2018ರ ನವೆಂಬರ್ 3ರಲ್ಲಿ ಕಾಯಂಗೊಂಡಿದ್ದರು.

Megha
the authorMegha

Leave a Reply

error: Content is protected !!